ಕೆಲವೇ ದಿನಗಳಲ್ಲಿ ಅವರಾದಿಯಿಂದ ತಿಮ್ಮಾಪೂರವರೆಗಿನ 18 ಕೋಟಿ ರೂಗಳ ವೆಚ್ಚದ ರಸ್ತೆ ಕಾಮಗಾರಿ ಪೂರ್ಣ-ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಅವರಾದಿ, ಹಳೆಯರಗುದ್ರಿ, ಹೊಸಯರಗುದ್ರಿ, ತಿಮ್ಮಾಪೂರ ಗ್ರಾಮಗಳ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಲು ಎಸ್‍ಎಚ್‍ಡಿಪಿ ಯೋಜನೆಯಡಿ 18 ಕೋಟಿ ರೂಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕೈಗೊಂಡಿದ್ದು, ಕಾಮಗಾರಿಯೂ ಮುಗಿಯುವ ಹಂತದಲ್ಲಿದೆ ಎಂದು ಕೆಎಮ್‍ಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಇತ್ತಿಚೆಗೆ ತಾಲೂಕಿನ ಅವರಾದಿ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಅವರಾದಿ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ರಸ್ತೆಯನ್ನು ಅಭಿವೃದ್ದಿಪಡಿಸುತ್ತಿರುವುದಾಗಿ ತಿಳಿಸಿದರು.
ಅವರಾದಿ ಗ್ರಾಮದಿಂದ ಘಟಪ್ರಭಾ ನದಿವರೆಗೆ ರಸ್ತೆ ಹಾಗೂ ಸೇತುವೆ ಕಾಮಗಾರಿ ಮತ್ತು ಅರಳಿಮಟ್ಟಿ ರಸ್ತೆಯಲ್ಲಿರುವ ಸರ್ಕಾರಿ ಪ್ರೌಢಶಾಲೆವರೆಗಿನ ರಸ್ತೆಯನ್ನು ಸುಧಾರಣೆ ಮಾಡಲಾಗುವುದು. ಸಾರ್ವಜನಿಕ ಸಂಚಾರಕ್ಕೆ ಇನ್ನಷ್ಟು ಒತ್ತು ನೀಡಲಾಗುವುದು. ಗ್ರಾಮಸ್ಥರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆಯನ್ನು ಶಾಸಕರು ನೀಡಿದರು.
ಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಕಾರ್ಯಕರ್ತರು ದುಡಿಯಬೇಕು. ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಲು ಎಲ್ಲರೂ ಒಂದಾಗಿ-ಒಗ್ಗಟ್ಟಾಗಿ ಶ್ರಮಿಸಬೇಕು. ಕಾರ್ಯಕರ್ತರ ಶ್ರಮದಿಂದ ಪಕ್ಷವು ರಾಜ್ಯದಲ್ಲಿ ಮತ್ತೇ ಅಧಿಕಾರದ ಚುಕ್ಕಾಣಿ ಹಿಡಿಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಜನರ ಪ್ರೀತಿ, ವಿಶ್ವಾಸವನ್ನು ಉಳಿಸಿಕೊಳ್ಳುವುದರ ಜೊತೆಗೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಬದ್ಧರಿರುವುದಾಗಿ ಅವರು ತಿಳಿಸಿದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಅವರಾದಿ ಹಾಗೂ ಸುತ್ತಮುತ್ತಲಿನ ಕಾರ್ಯಕರ್ತರು ಸತ್ಕರಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಅವರಾದಿ ಗ್ರಾ.ಪಂ ಅಧ್ಯಕ್ಷೆ ಸವಿತಾ ಚಂದ್ರಶೇಖರ ನಾಯಿಕ, ಉಪಾಧ್ಯಕ್ಷ ಸಂಜುಗೌಡ ಪಾಟೀಲ, ಎಪಿಎಮ್‍ಸಿ ಮಾಜಿ ಉಪಾಧ್ಯಕ್ಷ ಎಮ್.ಎಮ್.ಪಾಟೀಲ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಭಾಶ ಪಾಟೀಲ, ತಮ್ಮಣ್ಣಪ್ಪ ಪಾಟೀಲ, ಶಂಕರಗೌಡ ಪಾಟೀಲ, ನಿಂಗನಗೌಡ ನಾಡಗೌಡ, ಮೋಹನಗೌಡ ನಾಡಗೌಡ, ಪ್ರಭಾ ಶುಗರ ನಿರ್ದೇಶಕ ಗಿರೀಶ ಹಳ್ಳೂರ, ಹಣಮಂತ ಪೂಜಾರಿ, ಕಲ್ಲಪ್ಪ ರಂಜಣಗಿ, ಮಲ್ಲನಗೌಡ ಪಾಟೀಲ, ಮಲ್ಲಪ್ಪ ರಂಜಣಗಿ, ಗಿರೀಶ ನಾಡಗೌಡ, ಈರಪ್ಪ ಹುಲಗಬಾಳಿ, ಲಕ್ಷ್ಮಣ ಬಾಗೇವಾಡಿ, ಮಲ್ಲಪ್ಪ ಕುಂಬಾಳ್ಳಿ, ಬೀರಪ್ಪ ಹೊಸಟ್ಟಿ, ಸಿದ್ಧಾರೂಢ ಮಬನೂರ, ಹಣಮಂತ ಮೆಟ್ಟೆನ್ನವರ, ಬಿ.ಎಚ್.ಪಾಟೀಲ, ಚತ್ರಪ್ಪ ಮೇತ್ರಿ, ಫಕೀರಸಾಬ ಬಾಗವಾನ, ಮುತ್ತೇಪ್ಪ ಡೊಂಬರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.