ಬನವಾಸಿ: ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಲ್ಲಿನ ಅಪೌಷ್ಠಿಕತೆ ನಿವಾರಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಪೋಷಣ ಅಭಿಯಾನ ಮಾಸಚರಣೆ ಹಮ್ಮಿಕೊಂಡಿದೆ. ಅಪೌಷ್ಠಿಕತೆ ನಿವಾರಣೆ ಮಾಡಲು ನಾವೆಲ್ಲರೂ ಕೈಜೋಡಿಸಬೇಕಾಗಿದೆ ಎಂದು ಅಂಗನವಾಡಿ ಮೇಲ್ವಿಚಾರಕಿ ನಿರ್ಮಲ ಸಂತಿಮಠ ಹೇಳಿದರು.
ಅವರು ಪಟ್ಟಣದ ಕೇಂದ್ರ ಸಂಖ್ಯೆ 2ರ ಅಂಗನವಾಡಿಯಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪೋಷಣ ಅಭಿಯಾನ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಗರ್ಭಿಣಿಯರು ಮತ್ತು ಬಾಣಂತಿಯರು ಪೋಷಕಾಂಶಯುಕ್ತ ಸೊಪ್ಪು ತರಕಾರಿಗಳನ್ನು ಹೆಚ್ಚಿನ ಮ್ರಾಮಾಣದಲ್ಲಿ ಬಳಸುವುದರಿಂದ ಅಪೌಷ್ಠಿಕತೆಯನ್ನು ನಿವಾರಣೆ ಮಾಡಬಹುದು. ಸರ್ಕಾರವೂ ಗ್ರಾಮೀಣ ಭಾಗಗಳಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವವರ ಸಂಖ್ಯೆ ತಡೆಯಲು ಹಲವು ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಬಾಣಂತಿಯರ ಹಾಗೂ ಶಿಶುವಿನ ಆರೋಗ್ಯಯುತ ಬೆಳವಣಿಗೆಯ ದೃಷ್ಠಿಯಿಂದ ರಾಜ್ಯ ಸರ್ಕಾರ ಮಾತೃಪೂರ್ಣ ಯೋಜನೆ ಜಾರಿಗೆ ತಂದಿದ್ದು ಇವುಗಳ ಪ್ರಯೋಜನ ಪಡೆದುಕೊಳ್ಳಿ ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿ ಕಲಾವತಿ ನಾಯ್ಕ್, ಗರ್ಭಿಣಿ ಮತ್ತು ಬಾಣಂತಿಯರಿಗೆ ಆರೋಗ್ಯದ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ವಿದ್ಯಾ ರೇವಣಕರ, ಮಾಜಿ ಗ್ರಾ.ಪಂ. ಸದಸ್ಯೆ ಪೂರ್ಣಿವi ಪಿಳ್ಳೈ, ಚೇತನಾ ನಾಯರ್ ಹಾಗೂ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಗರ್ಭಿಣಿ, ಬಾಣಂತಿಯರು ಪಾಲ್ಗೋಂಡಿದ್ದರು.
Check Also
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಮೂಡಲಗಿ ತಾಲೂಕಾ ಎಸ್.ಸಿ/ಎಸ್.ಟಿ ಹಾಗೂ ಅಲ್ಪ ಅಲ್ಪಸಂಖ್ಯಾತರ ಶಾಖಾ ಘಟಕ ಉದ್ಘಾಟನೆ
Spread the loveಮೂಡಲಗಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಘಟನೆಯು ಸಮಜದಲ್ಲಿ ಹಿಂದುಳಿದ ಜನರಿಗೆ ಸರಕಾರದ ಸೌಲಭ್ಯಗಳನ್ನು ಒದಗಿಸುವ ಕೆಲಸವನ್ನು …