ನ.27ರಂದು ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ
ಬನವಾಸಿ: ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಶಿರಸಿ ತಾಲೂಕು ಪಂಚಾಯತ್ ಮತ್ತು ತಾಲೂಕು ಆಡಳಿತ ಹಾಗೂ ಶಿರಸಿ ಕೃಷಿ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಆರ್‍ಐಡಿಎಫ್-23 ಯೋಜನೆಯಡಿಯಲ್ಲಿ ನಿರ್ಮಿಸಿರುವ ಬನವಾಸಿ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಸಮಾರಂಭವೂ ನ.27ರಂದು ಸಂಜೆ 4 ಗಂಟೆಗೆ ಬನವಾಸಿ ರೈತ ಸಂಪರ್ಕ ಕೇಂದ್ರದ ಆವರಣ, ಕದಂಬೋತ್ಸವ ಮೈದಾನದಲ್ಲಿ ಜರುಗಲಿದೆ ಎಂದು ಜಂಟಿ ಕೃಷಿ ನಿರ್ದೇಶಕ ಹೊನ್ನಪ್ಪ ಗೌಡ ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರದ ಸಭಾಧ್ಯಕ್ಷರು ಹಾಗೂ ಶಿರಸಿ- ಸಿದ್ದಾಪೂರ ಶಾಸಕ ವಿಶ್ವೇಶ್ವರ ಹೆಗಡೆ ಅವರ ಘನ ಉಪಸ್ಥಿತಿಯಲ್ಲಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಶಿರಸಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ ಅಧ್ಯಕ್ಷತೆವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ, ವಾ.ಕ.ರ.ಸಾ ಸಂಸ್ಥೆಯ ಅಧ್ಯಕ್ಷ ವಿ.ಎಸ್.ಪಾಟೀಲ್, ಕರ್ನಾಟಕ ಜೀವ ವೈವಿದ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಆಶೀಸರ, ಲೋಕಸಭಾ ಸದಸ್ಯ ಅನಂತಕುಮಾರ ಹೆಗಡೆ, ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಶ್ರೀಕಾಂತ್ ಘೋಟ್ನೆಕರ, ಎಸ್.ವಿ.ಸಂಕನೂರ, ಶಾಂತಾರಾಮ ಬುಡ್ನ ಸಿದ್ದಿ, ಜಿ.ಪಂ ಸದಸ್ಯೆ ರೂಪಾ ನಾಯ್ಕ್, ಬಸವರಾಜ ದೊಡ್ಮನಿ, ಉಷಾ ಹೆಗಡೆ, ಚಂದ್ರು ದೇವಾಡಿಗ, ಸುರೇಶ ನಾಯ್ಕ್, ಲತಾ ನಾಯ್ಕ್, ಪ್ರೇಮಾ ಬೇಡರ, ರತ್ನಾ ಶೆಟ್ಟಿ, ಎಸ್.ಎನ್. ಭಟ್ಟ ಮತ್ತಿತರರ ಗಣ್ಯರು ಆಗಮಿಸಲಿದ್ದಾರೆ. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸಬೇಕೆಂದು ಶಿರಸಿ ಉಪ ಕೃಷಿ ನಿರ್ದೇಶಕ ಟಿ.ಎಚ್. ನಟರಾಜ್ ಹಾಗೂ ಶಿರಸಿ ಸಹಾಯಕ ಕೃಷಿ ನಿರ್ದೇಶಕ ಮಧುಕರ ನಾಯ್ಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.