Breaking News
Home / Recent Posts / ದಿ.ಪುನೀತ್ ರಾಜಕುಮಾರ್ ಅನಘ್ರ್ಯ ರತ್ನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ನಿಮಿತ್ಯ ಕೆಎಂಎಫ್ ಕಛೇರಿಯಲ್ಲಿ ರಕ್ತದಾನ ಶಿಬಿರ

ದಿ.ಪುನೀತ್ ರಾಜಕುಮಾರ್ ಅನಘ್ರ್ಯ ರತ್ನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ನಿಮಿತ್ಯ ಕೆಎಂಎಫ್ ಕಛೇರಿಯಲ್ಲಿ ರಕ್ತದಾನ ಶಿಬಿರ

Spread the love

ದಿ.ಪುನೀತ್ ರಾಜಕುಮಾರ್ ಅನಘ್ರ್ಯ ರತ್ನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ನಿಮಿತ್ಯ ಕೆಎಂಎಫ್ ಕಛೇರಿಯಲ್ಲಿ ರಕ್ತದಾನ ಶಿಬಿರ

ಬೆಂಗಳೂರು : ಕೆಎಂಎಫ್ ನಂದಿನಿ ರಾಯಭಾರಿಯಾಗಿದ್ದ ಜನಪ್ರೀಯ ನಟ ದಿ. ಪುನೀತ್ ರಾಜಕುಮಾರ್ ಅವರು ಅಗಲಿ ಹೋಗಿದ್ದರೂ, ಇನ್ನೂ ಅವರ ನೆನಪು ಜನರ ಹೃದಯದಲ್ಲಿ ಶಾಶ್ವತವಾಗಿ ಇರುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಇಲ್ಲಿಯ ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ದಿ. ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ಅಂಗವಾಗಿ ಜರುಗಿದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೆಎಂಎಫ್ ಬೆಳವಣಿಗೆಯಲ್ಲಿ ಪುನೀತ್ ರಾಜಕುಮಾರ ಅವರ ಪಾತ್ರ ಹಿರಿದಾಗಿತ್ತು ಎಂದು ಹೇಳಿದರು.
ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬ (ಮಾರ್ಚ-17)ದ ಅಂಗವಾಗಿ ಸ್ವಯಂ ಪ್ರೇರಿತರಾಗಿ ನಮ್ಮ ಸಂಸ್ಥೆಯ ನೌಕರರು ರಕ್ತದಾನ ಮಾಡಿರುವುದು ಶ್ಲಾಘನೀಯವಾಗಿದೆ. ಕೆಎಂಎಫ್ ರಾಜ್ಯದ ಎಲ್ಲ ವರ್ಗಗಳ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ರುಚಿ-ಶುಚಿಯಾದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ನಂದಿನಿ ಬ್ರಾಂಡ್ ಅಡಿಯಲ್ಲಿ ಕಳೆದ 4 ದಶಕಗಳಿಂದ ಒದಗಿಸುತ್ತ ಬರುತ್ತಿದೆ. ರಾಜ್ಯ ಮತ್ತು ಹೊರರಾಜ್ಯಗಳಲ್ಲಿಯೂ ಗ್ರಾಹಕರ ಆಯ್ಕೆ ನಮ್ಮ ನಂದಿನಿ ಬ್ರಾಂಡ್ ಆಗಿದೆ ಎಂದು ಅವರು ಹೇಳಿದರು.
ದಿ. ಪುನೀತ್ ರಾಜಕುಮಾರ್ ಅವರಿಗೆ ಶೀಘ್ರದಲ್ಲಿಯೇ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಿದ್ದು, ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಫಾರಸ್ಸು ಮಾಡಿದ್ದಾರೆಂದು ಹೇಳಿದರು.
ಮೇರು ನಟ ಡಾ. ರಾಜಕುಮಾರ್ ಅವರ ಕುಟುಂಬದ ಪರವಾಗಿ ಹಿರಿಯ ನಟ ರಾಮಕುಮಾರ್ ಅವರ ಪುತ್ರಿ ಹಾಗೂ ಚಿತ್ರನಟಿ ಧನ್ಯಾ ರಾಮಕುಮಾರ್ ಅವರು ಆಗಮಿಸಿ ಕೆಎಂಎಫ್ ಹಮ್ಮಿಕೊಂಡಿರುವ ಸ್ವಯಂ ಪ್ರೇರಿತ ರಕ್ತದಾನ ಶಿಬಿರದ ಉದ್ಧೇಶಗಳನ್ನು ಪ್ರಶಂಸಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕರಾದ ಕಾ.ಪು. ದಿವಾಕರಶೆಟ್ಟಿ, ಶ್ರೀಶೈಲಗೌಡ ಪಾಟೀಲ, ನಂಜುಂಡಸ್ವಾಮಿ, ಎಂ.ಡಿ. ಬಿ.ಸಿ. ಸತೀಶ, ಕಹಾಮದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ