ಬೆಳಗಾವಿ : ಮನುಷ್ಯನಿಗೆ ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಬೇಕಾದರೆ ಕ್ರೀಡೆ ಅತ್ಯವಶ್ಯಕವಾಗಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷರಾದ ಸಿದ್ದಣ್ಣ ದುರದುಂಡಿ ಹೇಳಿದರು.
ಅವರು ಮುನವಳ್ಳಿ ಜಿ ವಿ ನಾಯಕ್ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾರತ ಸರ್ಕಾರ ನೆಹರು ಯುವ ಕೇಂದ್ರ ಬೆಳಗಾವಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಸ್ವಾಮಿ ವಿವೇಕಾನಂದ ಕ್ರೀಡಾ ಮತ್ತು ಸಾಂಸ್ಕೃತಿಕ ಯುವ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸವದತ್ತಿ ತಾಲೂಕಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಕ್ರೀಡಾಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಹೆಣ್ಣಿರಲಿ ಗಂಡಿರಲಿ ಮನೆಗೊಂದು ಕ್ರೀಡಾಪಟು ಇರಲಿ. ಆಟದಲ್ಲಿ ಸೋಲು ಗೆಲುವು 1ನಾಣ್ಯದ 2ಮುಖಗಳಿದ್ದಂತೆ ಗೆದ್ದವರು ಹಿಗ್ಗದೆ ಸೋತವರು ಕುಗ್ಗದೆ ದಿನನಿತ್ಯದ ಜೀವನದಲ್ಲಿ ಕ್ರೀಡೆಯಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕೆಂದು ಹೇಳಿದರು. ಸವದತ್ತಿ ತಾಲೂಕಾ ಯುವಸಂಘಗಳ ಒಕ್ಕೂಟದ ತಾಲ್ಲೂಕು ಅಧ್ಯಕ್ಷ ಮಹಾದೇವ ಮುರಗೋಡ ಮಾತನಾಡಿ ಗ್ರಾಮೀಣ ಭಾಗದ ಕ್ರೀಡೆಗಳನ್ನು ಬೆಳೆಸಲು ಭಾರತ ಸರ್ಕಾರದ ನೆಹರು ಯುವ ಕೇಂದ್ರ ಮಾಡುವಂಥ ಕಾರ್ಯಚಟುವಟಿಕೆಗಳು ಯುವ ಚಟುವಟಿಕೆಗಳ ಕಾರ್ಯಕ್ರಮಗಳ ಕಾರ್ಯ ನಿಜವಾಗಲೂ ಶ್ಲಾಘನೀಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಗಂಗಾಧರ ಆಲಮ್ಮನವರ ವಹಿಸಿ ಮಾತನಾಡಿ ನೆಹರು ಯುವ ಕೇಂದ್ರ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಸಂಘಟಿಕರು ಜಿಲ್ಲೆಯಾದ್ಯಂತ ಮಾಡುವ ಕಾರ್ಯಗಳು ಉತ್ತಮವಾಗಿವೆ.
ಇದರ ಸದುಪಯೋಗವನ್ನು ನಮ್ಮ ಗ್ರಾಮೀಣ ಭಾಗದ ಕ್ರೀಡಾ ಪಟುಗಳು ಯುವ ಜನರು ಪಡೆದುಕೊಳ್ಳಬೇಕೆಂದು ಹೇಳಿದರು. ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಕರಾದ ಎಂ ಎನ್ ಲಕ್ಕಣ್ಣನವರ ಎಂ ಎಂ ಕಟಿಗೆನ್ನವರ ಎಚ್ ಎಫ್ ಗೂಟಿ ಎ ಐ ಸಿರಸಂಗಿ ಎಸ್ ಎಚ್ ರಾಠೋಡ ಶಿವಾನಂದ ನಾಯ್ಕ ರಾಷ್ಟ್ರೀಯ ಸ್ವಯಂ ಸೇವಕ ಪ್ರಶಾಂತ ಕಡಿ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ ಸಂಘಟಿಕರು ಮುಂತಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಗ್ರಾಮೀಣ ಕ್ರೀಡೆಗಳಾದ ಕಬಡ್ಡಿ ಕೋ ಕೋ ವಾಲಿಬಾಲ್ ರನ್ನಿಂಗ್ ಗುಂಡು ಎಸೆತ ಸ್ಪರ್ಧೆಗಳು ಮಾಡಿ ಸ್ಪರ್ಧೆಯ ವಿಜೇತ ತಂಡಗಳಿಗೆ ಹಾಗೂ ವಿಜೇತರಿಗೆ ಬಹುಮಾನಗಳನ್ನು ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು.