ಬೆಳಗಾವಿ: ನಾಳೆಯಿಂದ (ಜ. 29 ಮತ್ತು 30) ಎರಡು ದಿನಗಳ ಕಾಲ ಬೆಳಗಾವಿ ನಗರದ ಮಯೂರ ಪ್ರೆಸಿಡೇನ್ಸಿ ಕ್ಲಬ್‌ನಲ್ಲಿ ಬಿಜೆಪಿ ರೈತ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿಯ ಸಭೆ ನಡೆಯಲಿದೆ. ಮ. 12 ಗಂಟೆಗೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಈ ಸಭೆಯ ಉದ್ಘಾಟನೆಯನ್ನು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯರು, ಮಾಜಿ ಮುಖ್ಯಮಂತ್ರಿಗಳು ಹಾಗೂ ರೈತ ನಾಯಕರಾದ ಬಿ.ಎಸ್. ಯಡಿಯೂರಪ್ಪ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಷ್ಟ್ರೀಯ ರೈತ ಮೋರ್ಚಾದ ಅಧ್ಯಕ್ಷರಾದ ರಾಜಕುಮಾರ ಚಹರ್ ವಹಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ರಾಜ್ಯ ಅಧ್ಯಕ್ಷರಾದ ನಳಿನಕುಮಾರ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ. ರವಿ, ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಸಚಿವರಾದ ಶಶಿಕಲಾ ಜೊಲ್ಲೆ, ರಾಜ್ಯದ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ, ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ಮಂಗಲಾ ಅಂಗಡಿ, ಬೆಳಗಾವಿ ಮಹಾನಗರ ಜಿಲ್ಲಾಧ್ಯಕ್ಷರು ಹಾಗೂ ಶಾಸಕರಾದ ಅನೀಲ ಬೆನಕೆ, ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷರಾದ ಸಂಜಯ ಪಾಟೀಲ, ಬೆಳಗಾವಿ ದಕ್ಷಿಣ ಶಾಸಕರಾದ ಅಭಯ ಪಾಟೀಲ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ ಮಾಜಿ ಶಾಸಕರು ಭಾಗವಹಿಸಲಿದ್ದಾರೆ.
*ಸಮಾರೋಪ ಸಮಾರಂಭ:* ಸೋಮವಾರ 30 ರಂದು ಮ 12.30 ಗಂಟೆಗೆ ರಾಷ್ಟ್ರೀಯ ಕಾರ್ಯಕಾರಿಣಿಯ ಸಭೆಯ ಸಮಾರೋಪ ಸಮಾರಂಭ ನಡೆಯಲಿದ್ದು, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್. ಸಂತೋಷ ಜೀ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ಮುಖ್ಯಅತಿಥಿಗಳಾಗಿ ರಾಜ್ಯದ ಕೃಷಿ ಸಚಿವರಾದ ಬಿ. ಸಿ ಪಾಟೀಲ ಸೇರಿದಂತೆ ಜಿಲ್ಲೆಯ ಎಲ್ಲ ಸಚಿವರು, ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ ಮಾಜಿ ಶಾಸಕರು ಭಾಗವಹಿಸಲಿದ್ದಾರೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.