Breaking News
Home / Recent Posts / ಯುವ ಪೀಳಿಗೆ ತಮ್ಮ ಜೀವನದಲ್ಲಿ ನಿಜಶರಣ ಅಂಬಿಗರ ಚೌಡಯ್ಯನ ತತ್ವದರ್ಶಗಳನ್ನು ಅಳವಡಿಸಿಕೊಳ್ಳಬೇಕು- ರಮೇಶ ಅಳಗುಂಡಿ

ಯುವ ಪೀಳಿಗೆ ತಮ್ಮ ಜೀವನದಲ್ಲಿ ನಿಜಶರಣ ಅಂಬಿಗರ ಚೌಡಯ್ಯನ ತತ್ವದರ್ಶಗಳನ್ನು ಅಳವಡಿಸಿಕೊಳ್ಳಬೇಕು- ರಮೇಶ ಅಳಗುಂಡಿ

Spread the love

ಬೆಟಗೇರಿ: ಇಂದಿನ ಯುವ ಪೀಳಿಗೆ ತಮ್ಮ ಜೀವನದಲ್ಲಿ ನಿಜಶರಣ ಅಂಬಿಗರ ಚೌಡಯ್ಯನ ತತ್ವದರ್ಶಗಳನ್ನು ಅಳವಡಿಸಿಕೊಳ್ಳಬೇಕು. ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು.
ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ ಜನ್ಮ ದಿನಾಚರÀಣೆ ಕಾರ್ಯಕ್ರಮದಲ್ಲಿ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ನೈಜ ಕಾಯಕದೊಂದಿಗೆ ವಚನ ಸಾಹಿತ್ಯಕ್ಕೆ ಕೊಡುಗೆ ನೀಡಿದ ಹಾಗೂ ಸಮಾಜದ ಅಂಕು ಡೊಂಕು ತಿದ್ದಲು ಮಾರ್ಗದರ್ಶನ ನೀಡಿದ ನಿಜಶರಣ ಚೌಡಯ್ಯನವರ ಆದರ್ಶ ನಮಗೆಲ್ಲಾ ಸ್ಪೂರ್ತಿಯಾಗಿದೆ ಎಂದರು.
ಸ್ಥಳೀಯ ಪ್ರೌಢ ಶಾಲೆಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಅಂಬಿಗರ ಚೌಡಯ್ಯನವರ ಜನ್ಮ ದಿನಾಚರÀಣೆಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಶಾಲೆಯ ಶಿಕ್ಷಕರಾದÀ ಮೋಹನ ತುಪ್ಪದ ಅವರು ನಿಜಶರಣ ಚೌಡಯ್ಯ ಅವರ ಬದುಕು ಬರಹದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಜಿ.ಆರ್.ಬಾಗೋಜಿ ಎ.ಬಿ.ತಾಂವಶಿ, ಶುಭಾ ಬಿ., ವಿ.ಬಿ.ಬಿರಾದಾರ, ಈಶ್ವರ ಮುನವಳ್ಳಿ, ಮಲ್ಹಾರಿ ಪೋಳ, ಶಾಲೆಯ ಎಸ್‍ಡಿಎಂಸಿ ಸದಸ್ಯರು, ಶಿಕ್ಷಕರು, ಅತಿಥಿ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು, ಇತರರು ಇದ್ದರು.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ