ನೇತಾಜಿ ಸುಭಾಷ್‍ಚಂದ್ರ ಬೋಸರು ಈ ದೇಶ ಕಂಡ ಅಪ್ರತಿಮ ನಾಯಕರಾಗಿದ್ದರು

ಬೆಟಗೇರಿ:ನೇತಾಜಿ ಸುಭಾಷ್‍ಚಂದ್ರ ಬೋಸರು ರಾಷ್ಟ್ರಭಕ್ತಿಯ ಪ್ರಬಲ ಕಿಡಿಯನ್ನು ಹೊತ್ತಿಸಿದ ಹೋರಾಟಗಾರ, ಈ ದೇಶ ಕಂಡ ಅಪ್ರತಿಮ ನಾಯಕ ಹಾಗೂ ಮುತ್ಸದ್ಧಿಯಾಗಿದ್ದರು ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು.
ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ರವಿವಾರದಂದು ನೇತಾಜಿ ಸುಭಾಷ್‍ಚಂದ್ರ ಬೋಸರ 125ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ಸುಭಾಷ್‍ಚಂದ್ರ ಬೋಸ ಅವರ ಜೀವನ ಮತ್ತು ಸಂದೇಶಗಳು ನಮಗೆಲ್ಲಾ ಸದಾ ಪ್ರೇರಣೆದಾಯಕವಾಗಿವೆ ಎಂದರು.
ಸ್ಥಳೀಯ ಪ್ರೌಢ ಶಾಲೆಯಲ್ಲಿರುವ ಭಾರತಾಂಬೆಯ ಭವ್ಯ ಮೂರ್ತಿಯಡಿ ನೇತಾಜಿ ಸುಭಾಷ್‍ಚಂದ್ರ ಬೋಸರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಬೋಸರ ಜನ್ಮ ದಿನಾಚರಣೆಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
ಮಹಾದೇವ ಹಾದಿಮನಿ, ವಿಠಲ ಬಡಿಗೇರ, ಮಲ್ಹಾರಿ ಪೋಳ, ಶಾಲೆಯ ಎಸ್‍ಡಿಎಂಸಿ ಸದಸ್ಯರು, ಶಿಕ್ಷಕರು, ಅತಿಥಿ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು, ಇತರರು ಇದ್ದರು.
IN MUDALGI Latest Kannada News