ವಿದ್ಯಾರ್ಥಿಗಳಲ್ಲಿ ಛಲವಿದ್ದರೆ ಸಾಧನೆ ಸಾಧ್ಯ: ಅರಿಹಂತ ಬಿರಾದಾರ ಪಾಟೀಲ
*ಬೆಟಗೇರಿ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ *
ಶಾಲೆಯ ಸಮಗ್ರ ಪ್ರಗತಿಗೆ ಮೆಚ್ಚುಗೆ
ಬೆಟಗೇರಿ:ಪ್ರತಿಯೊಬ್ಬ ವಿದ್ಯಾರ್ಥಿಯೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆಯಲು ಪ್ರಯತ್ನಿಸಬೇಕು. ಶಾಲಾ ವಿದ್ಯಾರ್ಥಿಗಳಲ್ಲಿ ಛಲವಿದ್ದರೆ ಸಾಧನೆ ಸಾಧ್ಯವಾಗುತ್ತದೆ ಎಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನೋಡಲ್ ಅಧಿಕಾರಿ ಅರಿಹಂತ ಬಿರಾದಾರ ಪಾಟೀಲ ಹೇಳಿದರು.
ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಗೆ ಮಾ.11ರಂದು ಭೇಟಿ ನೀಡಿ, ಇಲ್ಲಿಯ ಪ್ರೌಢ ಶಾಲೆಯ ಸಮಗ್ರ ಪ್ರಗತಿಯ ಕಂಡು ಮೆಚ್ಚುಗೆ ವ್ಯಕ್ತಪಡಿಸಿದ ಬಳಿಕ ಮಾತನಾಡಿ, ಈ ಪ್ರೌಢ ಶಾಲೆಯ ಮಕ್ಕಳಿಗೆ ಅಟಲ್ ಟಿಂಕ್‍ರಿಂಗ್ ಲ್ಯಾಬ್‍ದ ಮೂಲಕ ತಂತ್ರಜ್ಞಾನ ಕಲಿಕೆಯ ಸೌಭಾಗ್ಯ ಸಿಕ್ಕಿದೆ, ಶಾಲಾ ಮಕ್ಕಳು ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಈ ಸಲ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಹೆಚ್ಚು ಅಂಕ ಪಡೆದು ಉತ್ತಮ ಸಾಧನೆ ಮಾಡಬೇಕು. ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸುವ ಕುರಿತು ಅಧ್ಯಯನ ವಿಧಾನ ಸೇರಿದಂತೆ ಹಲವಾರು ಮಹತ್ವದ ವಿಷಯಗಳನ್ನು ಎಸ್‍ಎಸ್‍ಎಲ್‍ಸಿ ಪರೀಕ್ಷೆ ನೋಡಲ್ ಅಧಿಕಾರಿ ಅರಿಹಂತ ಬಿರಾದಾರ ಪಾಟೀಲ ವಿದ್ಯಾರ್ಥಿಗಳಿಗೆ ತಿಳಿಸಿದರು.
ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ಥಳೀಯ ಪ್ರೌಢ ಶಾಲೆಯ ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ ಕೈಗೊಂಡ ಪಠ್ಯಗಳ ವಿಶೇಷ ಭೋದನೆ, ತರಗತಿಗಳ ಆಯೋಜನೆ ಕುರಿತು ಹೇಳಿದರು.
ಮಲ್ಲಿಕಾರ್ಜುನ ಹಿರೇಮಠ, ಮೋಹನ ತುಪ್ಪದ, ಶುಭಾ ಬಿ., ಪ್ರಕಾಶ ಕುರಬೇಟ, ವೀರಣ್ಣ ಪಟಗುಂದಿ, ರಾಕೇಶ ನಡೋಣಿ, ಅಪ್ಪಾಸಾಬ ತಾಂವಶಿ, ಗಣಪತಿ ಭಾಗೋಜಿ, ಶಾಲೆಯ ಅತಿಥಿ ಶಿಕ್ಷಕರು, ವಿದ್ಯಾರ್ಥಿಗಳು, ಸ್ಥಳೀಯರು ಇದ್ದರು.