ಬೆಟಗೇರಿ ಪ್ರೌಢ ಶಾಲೆ ಮುಖ್ಯೋಪಾಧ್ಯಯ ರಮೇಶ ಅಳಗುಂಡಿಗೆ ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ
ಬೆಟಗೇರಿ:ಬೆಳಗಾವಿ ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಸಭಾಭವನದಲ್ಲಿ ಮಾ.13ರಂದು ನಡೆದ ಡಾ.ಪಂಡಿತ ಪುಟ್ಟರಾಜ ಗವಾಯಿರವರ ಮತ್ತು ಕರ್ನಾಟಕ ರತ್ನ ಪುನೀತ ರಾಜಕುಮಾರರವರ ಜಯಂತಿ ಪ್ರಯುಕ್ತ ರಾಜ್ಯಮಟ್ಟದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಬೆಳಗಾವಿ ರಾಷ್ಟ್ರೀಯ ಸಮಾಜ ಕಲ್ಯಾಣ ಸೇವಾ ಸಂಸ್ಥೆಯವರು ನೀಡುವ ಪ್ರಸಕ್ತ ವರ್ಷದ ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿಯನ್ನು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಅವರಿಗೆ ನೀಡಿ ಗೌರವಿಸಿದೆ.
ಬೆಳಗಾವಿ ಮುಕ್ತಿಮಠದ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ, ಬೆಳಗಾವಿ ರಾಷ್ಟ್ರೀಯ ಸಮಾಜ ಕಲ್ಯಾಣ ಸೇವಾ ಸಂಸ್ಥೆಯ ರಾಜ್ಯಾಧ್ಯಕ್ಷ ಲಕ್ಷ್ಮಣ ಮೆಚ್ಚಣ್ಣವರ, ರಾಜ್ಯಗೌರವಾಧ್ಯಕ್ಷ ಅರ್ಜುನ ನಾಯಿಕವಾಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕತ್ತಿ, ವಾಸುದೇವ ರಾಠೊಡ, ಲಕ್ಷ್ಮೀ ಮೆಚ್ಚಣ್ಣವರ, ಗೋಕಾಕದ ರಾಜಕೀಯ ಮುಖಂಡ ಅಶೋಕ ಪೂಜೇರಿ, ಈಶ್ವರಚಂದ್ರ ಬೆಟಗೇರಿ, ಗಣ್ಯರು, ಇತರರು ಇದ್ದರು.
ಮೆಚ್ಚುಗೆ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶಿಕ್ಷಣ ಪ್ರೇಮಿಗಳು, ಗಣ್ಯರು, ಹಿರಿಯ ನಾಗರಿಕರು, ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಮತ್ತು ಸದಸ್ಯರು, ಶಿಕ್ಷಕರು, ಸಿಬ್ಬಂದಿ, ಸ್ಥಳೀಯರು ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ ಪಡೆದ ಇಲ್ಲಿಯ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.