Breaking News
Home / Recent Posts / ಪರೀಕ್ಷಾ ಕೇಂದ್ರದ ಸುತ್ತಮುತ್ತ 144 ಕಲಂ ನೀಷೆದಾಜ್ಞೆ ಜಾರಿ, ನಕಲು ನಡೆಯದಂತೆ ಸಿಸಿ ಕ್ಯಾಮರಾ

ಪರೀಕ್ಷಾ ಕೇಂದ್ರದ ಸುತ್ತಮುತ್ತ 144 ಕಲಂ ನೀಷೆದಾಜ್ಞೆ ಜಾರಿ, ನಕಲು ನಡೆಯದಂತೆ ಸಿಸಿ ಕ್ಯಾಮರಾ

Spread the love

ಬೆಟಗೇರಿ: ಮಾ.28ರಿಂದ ಏ.11ರ ವರೆಗೆ ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ವಿ.ವಿ.ದೇ ಸರಕಾರಿ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಜರುಗುತ್ತಿರುವ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಹಿನ್ನಲೆಯಲ್ಲಿ ಮಾ.28ರಂದು ಪ್ರಥಮ ಭಾಷೆ ಕನ್ನಡ ವಿಷಯದ ಪರೀಕ್ಷೆ ನಡೆಯಿತು.
ಸ್ಥಳೀಯ ಪರೀಕ್ಷಾ ಕೇಂದ್ರದಲ್ಲಿ 14 ಪರೀಕ್ಷಾ ಕೊಠಡಿ, 16 ಜನ ಪರೀಕ್ಷಾ ಕೊಠಡಿ ಮೇಲ್ವಿಚಾರಕರು, ಒಬ್ಬರು ಸ್ಥಾನಿಕ ವಿಕ್ಷಕ ಜಾಗೃತ ದಳ, ಒಬ್ಬರು ಪರೀಕ್ಷಾ ಮುಖ್ಯ ಅಧಿಕ್ಷಕ, ಓರ್ವ ಕಸ್ಟೊಡಿಯನ್, ಒಬ್ಬರು ಪರೀಕ್ಷಾ ಕೇಂದ್ರದ ಸಹಾಯಕ ಕಾರ್ಯನಿರ್ವಹಿಸಿದರು.
ಇಲ್ಲಿಯ ಪರೀಕ್ಷಾ ಕೇಂದ್ರದಲ್ಲಿ ಒಟ್ಟು 265 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದರು. ಇಲ್ಲಿಯ ಪರೀಕ್ಷಾ ಕೇಂದ್ರದ ಸುತ್ತಮುತ್ತ 144 ಕಲಂ ನೀಷೆದಾಜ್ಞೆ ಜಾರಿಗೊಳಿಸಲಾಗಿ ನಕಲು ನಡೆಯದಂತೆ ಸಿಸಿ ಕ್ಯಾಮರಾ ಹಾಗೂ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಪೋಲಿಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ ಎಂದು ಸ್ಥಳೀಯ ಪರೀಕ್ಷಾ ಕೇಂದ್ರದ ಮುಖ್ಯಸ್ಥ ರಮೇಶ ಅಳಗುಂಡಿ ತಿಳಿಸಿದರು.
ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಕರೋನಾ ಹಿನ್ನಲೆಯಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳನ್ನು ಪರೀಕ್ಷಿಸಿದರು. ಕನ್ನಡ ವಿಷಯ ಪರೀಕ್ಷೆ ಬರೆದು, ಪರೀಕ್ಷಾ ಅವಧಿ ಮುಗಿದ ಬಳಿಕ ವಿದ್ಯಾರ್ಥಿಗಳು ಪ್ರಶ್ನೆಗಳಿಗೆ ತಾವು ಉತ್ತರಿಸಿರುವ ಅಂಕಗಳ ಕುರಿತು ತಮ್ಮ ತಮ್ಮಲ್ಲಿ ಲೆಕ್ಕ ಮಾಡುತ್ತಾ ನಗು ಮೊಗದಲ್ಲಿ ಪರೀಕ್ಷಾ ಕೇಂದ್ರದ ಕೊಠಡಿಯಿಂದ ಹೊರ ಬಂದರು.


Spread the love

About inmudalgi

Check Also

ಪಟ್ಟಗುಂದಿ ಗ್ರಾಮದಲ್ಲಿ ಶ್ರೀ ಜಡಿಸಿದ್ಧೇಶ್ವರ ರಥೋತ್ಸವ

Spread the loveಮೂಡಲಗಿ: ತಾಲೂಕಿನ ಪಟ್ಟಗುಂದಿ ಗ್ರಾಮದಲ್ಲಿ ಶ್ರೀ ಜಡಿಸಿದ್ಧೇಶ್ವರ ರಥೋತ್ಸವ ಅಪಾರ ಜನಸಮೂಹ ಮಧ್ಯೆ ಶುಕ್ರವಾರ ಸಂಜೆ ಜರುಗಿತು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ