ಆನಂದಕಂದರು ಅಪ್ಪಟ್ಟ ದೇಶಿ ಕವಿಯಾಗಿದ್ದರು: ರಮೇಶ ಅಳಗುಂಡಿ
ಬೆಟಗೇರಿ: ಡಾ.ಬೆಟಗೇರಿ ಕೃಷ್ಣಶರ್ಮರು ಪತ್ರಕರ್ತರಾಗಿ, ಕವಿಯಾಗಿ, ಕಥೆಗಾರರಾಗಿ, ವಿವಿಧ ಕ್ಷೇತ್ರಗಳಲ್ಲಿ ಸಾರ್ಥಕ ಸೇವೆ ಸಲ್ಲಿಸಿ ಕನ್ನಡ ಸಾರಸ್ವತ ಲೋಕಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಏ.16ರಂದು ನಡೆದ ಡಾ.ಬೆಟಗೇರಿ ಕೃಷ್ಣಶರ್ಮರ 122ನೇ ಜನ್ಮ ದಿನಾಚರಣೆ, ಹನುಮ ಹಾಗೂ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಆನಂದಕಂದರು ಅಪ್ಪಟ್ಟ ದೇಶಿ ಕವಿಯಾಗಿದ್ದರು. ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿದ ದಿವ್ಯ ಚೇತನರಾಗಿದ್ದಾರೆ ಎಂದರು.
ಇಲ್ಲಿಯ ಪ್ರೌಢ ಶಾಲೆಯ ಅತಿಥಿ ಶಿಕ್ಷಕ ಮಲ್ಹಾರಿ ಪೋಳ ಹನುಮ ಹಾಗೂ ಅಕ್ಕಮಹಾದೇವಿ ಜಯಂತಿ ಹಾಗೂ ಆನಂದಕಂದರ ಬದುಕು, ಬರಹದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಹನುಮ ಹಾಗೂ ಅಕ್ಕಮಹಾದೇವಿ ಜಯಂತಿ ಕೃಷ್ಣಶರ್ಮರ ಭಾವ ಚಿತ್ರಕ್ಕೆ ಪೂಜೆ ನೆರವೇರಿಸಿದ ಬಳಿಕ ಸಿಹಿ ವಿತರಿಸಲಾಯಿತು. ಈ ವೇಳೆ ಪ್ರೌಢ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಸಾಹಿತ್ಯಾಭಿಮಾನಿಗಳು, ಸ್ಥಳೀಯರು ಇದ್ದರು.