ಬೆಟಗೇರಿ:ಗ್ರಾಮದ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಸ್ಥಳೀಯ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಸುಮಾರು 9 ಲಕ್ಷ ರೂ.ಗಳÀಲ್ಲಿ ಹೈಟೆಕ್ ಶೌಚಾಲಯ ಹಾಗೂ ಸುಮಾರು 9 ಲಕ್ಷ ರೂ.ಗಳ ಅನುದಾನದಡಿಯಲ್ಲಿ ಅಡುಗೆ ಕೋಣೆ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ಜೂ.17ರಂದು ನಡೆಯಿತು.
ಸ್ಥಳೀಯ ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಗುದ್ದಲಿ ಪೂಜೆ ನೆರವೇರಿಸಿದರು. ಶಾಲೆಯ ಎಸ್‍ಡಿಎಂಸಿ ಮಾಜಿ ಅಧ್ಯಕ್ಷ ಶ್ರೀಶೈಲ ಗಾಣಗಿ ಅಧ್ಯಕ್ಷತೆ ವಹಿಸಿದರು.
ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಮಾತನಾಡಿ, ಸ್ಥಳೀಯ ಸರ್ಕಾರಿ ಪ್ರೌಢ ಶಾಲೆಯ ಸಮಗ್ರ ಅಭಿವೃದ್ಧಿಗೆ ಇಲ್ಲಿಯ ಗ್ರಾಮ ಪಂಚಾಯತಿ ಹಾಲಿ ಮತ್ತು ಮಾಜಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಶಿಕ್ಷಣ ಪ್ರೇಮಿಗಳು, ಸ್ಥಳೀಯರು ನೀಡುತ್ತಿರುವ ಸಹಾಯ, ಸಹಕಾರ ಶ್ಲಾಘನೀಯವಾಗಿದೆ ಎಂದರು.
ಗ್ರಾಪಂ ಕಾರ್ಯದರ್ಶಿ ಗೌಡಪ್ಪ ಮಾಳೇದ, ಗುತ್ತಿಗೆದಾರ ಬಸವರಾಜ ಕೋಣಿ, ಸುರೇಶ ಬಾಣಸಿ, ವಿಠಲ ಚಂದರಗಿ, ಈಶ್ವರ ಮುಧೋಳ, ಅಶೋಕ ಕೋಣಿ, ಈರಣ್ಣ ಬಳಿಗಾರ, ಈರಪ್ಪ ದೇಯಣ್ಣವರ, ಅಪ್ಪಣ್ಣ ಆಶೆಪ್ಪಗೋಳ, ಮಹಾಂತೇಶ ಭಜಂತ್ರಿ, ಸಿದ್ಧಾರೂಢ ಸವತಿಕಾಯಿ, ಮುತ್ತೆಪ್ಪ ಮನ್ನಾಪೂರ, ಶಾಲೆಯ ಎಸ್‍ಡಿಎಂಸಿ ಸದಸ್ಯರು, ಶಿಕ್ಷಕರು, ಗಣ್ಯರು, ಗ್ರಾಮಸ್ಥರು ಇದ್ದರು.