ಬೆಟಗೇರಿ:ಮನುಷ್ಯ ಪ್ರತಿದಿನ ಯೋಗ ಮಾಡುವುದರಿಂದ ರೋಗ ಬರುವುದಿಲ್ಲಾ. ಯೋಗ ನಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ವರದಾನವಾಗಿದೆ ಎಂದು ಬೆಟಗೇರಿ ಗ್ರಾಮದ ಚೈತನ್ಯ ಗ್ರುಪ್ಸ್‍ನ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಕಮಲಾಕ್ಷಿ ನಾಯ್ಕ ಹೇಳಿದರು.
ಬೆಟಗೇರಿ ಗ್ರಾಮದ ಚೈತನ್ಯ ಗ್ರಪ್ಸ್‍ನ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜೂ.21ರಂದು ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶ್ವಕ್ಕೆ ಯೋಗದ ಅನ್ಯನ್ಯ ಕೊಡುಗೆಯನ್ನು ಭಾರತ ದೇಶ ನೀಡಿದೆ ಎಂದರು.
ಸುಮಾರು ಗಂಟೆಗಳ ಕಾಲ ಉಭಯ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು, ವಿವಿಧ ಭಂಗಿಯ ಯೋಗಾಸನಗಳನ್ನು ಮಾಡಿದ ಬಳಿಕ ಎಲ್ಲರಿಗೂ ಸಿಹಿ ವಿತರಿಸಲಾಯಿತು. ಶಿಕ್ಷಕ ನಭೀಸಾಬ ನದಾಫ್ ವಿವಿಧ ಬಗೆಯ ಯೋಗಾಸನಗಳನ್ನು ಹೇಳಿಕೊಟ್ಟರು.
ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸಂಜಯ ಮೆಳವಂಕಿ, ಆಡಳಿತಾಧಿಕಾರಿ ರವಿ ಭರಮನಾಯ್ಕ, ಶಿಕ್ಷಕರು, ಸಿಬ್ಬಂದಿವರ್ಗ, ಉಭಯ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಇದ್ದರು.