ಬೆಟಗೇರಿ:ಧಾರವಾಡ ಪೂರ್ಣಾ ಪಿಯು ಕಾಲೇಜಿನ ವಿದ್ಯಾರ್ಥಿ, ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶಾಹೀದ ರಫೀಕ್ ಮಿರ್ಜಾನಾಯ್ಕ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ ಶೇ.90.16 ರಷ್ಟು (541) ಅಂಕ ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿ ಶಾಹೀದ ಮಿರ್ಜಾನಾಯ್ಕ ಸಾಧನೆಗೆ ಸ್ಥಳೀಯ ಶಿಕ್ಷಣಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
