ಬೆಟಗೇರಿ:ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾಗಿ ಪದೋನ್ನತಿ ಹೊಂದಿದ ಡಿಎಚ್‍ಒ ಡಾ.ಮಹೇಶ ಕೋಣಿ ಅವರನ್ನು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಸ್ಥರ ಪರವಾಗಿ ಜುಲೈ.12 ರಂದು ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಸತ್ಕರಿಸಲಾಯಿತು.
ಬೆಟಗೇರಿ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕ ಬಸವರಾಜ ಪಣದಿ ಮಾತನಾಡಿ, ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾಗಿ ಡಾ.ಮಹೇಶ ಕೋಣಿ ಅವರು ಹಲವು ವರ್ಷಗಳ ಕಾಲ ಸಲ್ಲಿಸಿದ ಅವಿಸ್ಮರಣೀಯ ಸೇವೆಯನ್ನು ಸ್ಮರಿಸಿ ಶ್ಲಾಘಿಸಿದರು.
ನ್ಯಾಯವಾದಿ ಎಂ.ಐ.ನೀಲಣ್ಣವರ, ಈರಯ್ಯ ಹಿರೇಮಠ, ಶ್ರೀಶೈಲ ಗಾಣಗಿ, ಶಿವಾಜಿ ನೀಲಣ್ಣವರ, ರಾಮಣ್ಣ ಬಳಿಗಾರ, ಗೋಕಾಕ ಶೈಕ್ಷಣಿಕ ವಲಯದ ಬಿಇಒ ಜಿ.ಬಿ.ಬಳಿಗಾರ, ಜಿ.ಆರ್.ಮಾಳಗಿ, ಜಿ.ಆರ್.ಸನದಿ ಸೇರಿದಂತೆ ಗಣ್ಯರು, ಮುಖಂಡರು, ಗ್ರಾಮಸ್ಥರು, ಮತ್ತೀತರರು ಇದ್ದರು.