Breaking News
Home / Recent Posts / ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಒಂದು ದಿನಕ್ಕೆ ಗಂಡು-ಹೆಣ್ಣಿಗೆ ಸಮಾನ ಕೂಲಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಒಂದು ದಿನಕ್ಕೆ ಗಂಡು-ಹೆಣ್ಣಿಗೆ ಸಮಾನ ಕೂಲಿ

Spread the love

ಬೆಟಗೇರಿ:ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಒಂದು ದಿನಕ್ಕೆ ಗಂಡು-ಹೆಣ್ಣಿಗೆ ಸಮಾನ ಕೂಲಿ ನೀಡಲಾಗುವುದು. ಸ್ಥಳೀಯರು ಮರಾಗ್ರಾಉಖಾ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಗೋಕಾಕ ತಾಪಂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ತಾಂತ್ರಿಕ ಸಹಾಯಕ ಲಕ್ಷ್ಮಣ ಚಿಲಕಂಡಿ ಹೇಳಿದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಬೆಳಗಾವಿ ಜಿಪಂ, ಗೋಕಾಕ ತಾಪಂ ಹಾಗೂ ಸ್ಥಳೀಯ ಗ್ರಾಪಂ ಸಹಯೋಗದಲ್ಲಿ ಕೂಲಿ ಕಾರ್ಮಿಕರಿಗೆ ಬಟ್ಟೆ ವಿತರಣೆ ಹಾಗೂ ಬೆಟಗೇರಿ ಗ್ರಾಮದ ವ್ಯಾಪ್ತಿಯಲ್ಲಿರುವ ಕಾಲುವೆ ಹೂಳೆತ್ತುವ ಕೆಲಸ ನಡೆದ ಸ್ಥಳಕ್ಕೆ ಜು.25ರಂದು ಭೇಟಿ ನೀಡಿ, ಸ್ಥಳೀಯ ಕಾಲುವೆ ಹೂಳೆತ್ತುವ ಕೆಲಸದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಸ್ಥಳೀಯ ಗ್ರಾಪಂ ಪಿಡಿಒ ಎಚ್.ಎನ್.ಬಾವಿಕಟ್ಟಿ, ಮಾತನಾಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಿಂದ ಕೂಲಿಕಾರರಿಗೆ, ರೈತರಿಗೆ ದೊರಕುವ ಸೌಲಭ್ಯಗಳ ಕುರಿತು ತಿಳಿಸಿದರು.
ಈ ವೇಳೆ ಗ್ರಾಪಂ ಕಾರ್ಯದರ್ಶಿ ಗೌಡಪ್ಪ ಮಾಳೇದ, ಸುರೇಶ ಬಾಣಸಿ, ವಿಠಲ ಚಂದರಗಿ, ಶಿವಾನಂದ ಐದುಡ್ಡಿ, ಮಂಜುನಾಥ ಕಂಬಿ, ಈರಣ್ಣ ದಂಡಿನ ಸೇರಿದಂತೆ ಗ್ರಾಪಂ ಸಿಬ್ಬಂದಿ, ಪುರುಷ ಮತ್ತು ಮಹಿಳಾ ಕೂಲಿ ಕಾರ್ಮಿಕರು ಇದ್ದರು.


Spread the love

About inmudalgi

Check Also

‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’

Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ