ಬೆಟಗೇರಿ:ಪಠ್ಯ ಮತ್ತು ಪಠ್ಯೇತರ ಚಟುವಟಿಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಸ್ಥೈರ್ಯ ಹೆಚ್ಚುತ್ತದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು.
ಸಮೀಪದ ಬಿಲಕುಂದಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜು.26 ರಂದು ಹಮ್ಮಿಕೊಂಡಿದ್ದ 2022-23 ನೇ ಸಾಲಿನ ಬೆಟಗೇರಿ ವಲಯ ಮಟ್ಟದ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,ಇಂದಿನ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದರ ಜೋತೆಗೆ ಉತ್ತಮ ಸಂಸ್ಕಾರ ಮೈಗೊಡಿಸಿಕೊಳ್ಳಬೇಕು ಎಂದರು.
ಸ್ಥಳೀಯ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ಟಿ.ಕೆ.ಟಕಳೆ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಮಾಜಿ ಸದಸ್ಯ ವಿಠಲ ಸವದತ್ತಿ, ತಾಪಂ ಮಾಜಿ ಸದಸ್ಯೆ ನೀಲಮ್ಮ ಬಳಿಗಾರ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಈ ವೇಳೆ ಕ್ರೀಡಾ ಜ್ಯೋತಿ ಪ್ರಜ್ವಲಿಸಲಾಯಿತು. ದೈಹಿಕ ಶಿಕ್ಷಕರಿಂದ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಮಾಡಿಸಿದ ಬಳಿಕ ವಿವಿಧ ಕ್ರೀಡೆಗಳಿಗೆ ಚಾಲನೆ ನೀಡಲಾಯಿತು.
ಗ್ರಾಪಂ ಮಾಜಿ ಅಧ್ಯಕ್ಷ ಶಿವಲಿಂಗಪ್ಪ ಬಳಿಗಾರ, ಗ್ರಾಪಂ ಅಧ್ಯಕ್ಷೆ ಆಶವ್ವ ಡಬರಿ, ಪಿಡಿಒ ಈರಪ್ಪ ಹೊಸಮನಿ, ಮೂಡಲಗಿ ವಲಯದ ದೈಹಿಕ ಶಿಕ್ಷಣ ಪರಿವೀಕ್ಷಕ ಜುನೇಬಿ ಪಟೇಲ, ಶಿವಾಜಿ ಬಳಿಗಾರ, ವಿವಿಧ ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರು, ಶಿಕ್ಷಕರು, ಗಣ್ಯರು, ಶಿಕ್ಷಣ ಪ್ರೇಮಿಗಳು, ವಿದ್ಯಾರ್ಥಿಗಳು ಇದ್ದರು.
