ಬೆಟಗೇರಿ:ಪ್ರಧಾನಮಂತ್ರಿ ಪೋಷಣ ಅಭಿಯಾನ ಯೋಜನೆಯಡಿ ಪೂರಕ ಪೌಷ್ಟಿಕ ಆಹಾರ ವಿತರಣೆ ಯೋಜನೆ ಅಂಗವಾಗಿ ಜು.27ರಂದು ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದ ಜೋತೆಗೆ ಮೊಟ್ಟೆ, ಬಾಳೆಹಣ್ಣು ಹಾಗೂ ಶೇಂಗಾ ಚೆಕ್ಕೆ ನೀಡುವ ಕಾರ್ಯಕ್ರಮ ನಡೆಯಿತು.
ಉಭಯ ಶಾಲೆಗಳ ಎಸ್‍ಡಿಎಂಸಿ ಅಧ್ಯಕ್ಷರಾದ ಉದ್ದಪ್ಪ ಚಂದರಗಿ, ರಾಮಣ್ಣ ನೀಲಣ್ಣವರ ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗಂಡು ಮಕ್ಕಳ ಶಾಲೆಯ ಮುಖ್ಯ ಶಿಕ್ಷಕ ವೈ.ಸಿ.ಶೀಗಿಹಳ್ಳಿ ಮಾತನಾಡಿ, ಸರ್ಕಾರ ಶಾಲಾ ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರದ ಪ್ರಯೋಜನಗಳ ಕುರಿತು ತಿಳಿಸಿದರು.
ಬೆಟಗೇರಿ ವಲಯದ ಸಿಆರ್‍ಪಿ ಎಮ್.ಬಿ.ನಾಯ್ಕರ, ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಮುಖ್ಯಶಿಕ್ಷಕ ಎಸ್.ಬಿ.ಸನದಿ, ನಿಂಗಪ್ಪ ಕಂಬಿ, ಸಂಜೀವ ಪೂಜೇರಿ, ಸುರೇಖಾ ಮೆಟ್ಟಿನವರ, ರೂಪಾ ರಂಜನಗಿ, ಪ್ರಕಾಶ ಗುಡದಾರ ಸೇರಿದಂತೆ ಉಭಯ ಶಾಲೆಗಳ ಶಿಕ್ಷಕ-ಶಿಕ್ಷಕಿಯರು, ಬಿಸಿಯೂಟ ಅಡುಗೆ ಸಿಬ್ಬಂದಿ, ಅತಿಥಿಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.