ಬೆಟಗೇರಿ:ಅರಬಾಂವಿ ಮಂಡಲ ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ ಹಾಗೂ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಗಜಾನನ ಯುವಕ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಸ್ಥಳೀಯ ಸದ್ಗುರು ಯಲ್ಲಾಲಿಂಗ ಮಠದ ಆವರಣದಲ್ಲಿ ಸೆ.17ರಂದು ಸಂಜೆ 6 ಗಂಟೆಗೆ 55/58 ಕೆ.ಜಿ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿಗಳ ಉದ್ಘಾಟನೆ ಸಮಾರಂಭ ನಡೆಯಲಿದೆ.
ರಾಜ್ಯ ಸಭಾ ಸದಸ್ಯ, ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಪಂದ್ಯಾವಳಿ ಉದ್ಘಾಟನೆ ನೆರವೇರಿಸಲಿದ್ದಾರೆ. ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡೆ, ಬೆಳಗಾವಿ ಗ್ರಾಮೀಣ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಕರ ಕುಲಕರ್ಣಿ, ಅರಬಾಂವಿ ಮಂಡಲ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ತಮ್ಮಣ್ಣ ದೇವರ, ಪ್ರಥಮ ದರ್ಜೆ ಗುತ್ತಿಗೆದಾರ ಬಸವರಾಜ ಕೋಣಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಬೆಳಗಾವಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಅವರು ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಿದ್ದಾರೆ.
ಕಲ್ಲೋಳಿ ಶ್ರೀ ಮಹಾಲಕ್ಷೀ ಸೌಹಾರ್ದ ಸಹಕಾರಿ ಸಂಘದ ಸ್ಥಳೀಯ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಈರಪ್ಪ ದೇಯಣ್ಣವರ, ಸಲಹಾ ಸಮಿತಿ ಸದಸ್ಯರು, ಘಟಪ್ರಭಾ ಶಾಖೆಯ ವ್ಯವಸ್ಥಾಪಕ ಪರಪ್ಪ ಗಿರೆಣ್ಣವರ, ಇಲ್ಲಿಯ ಗ್ರಾಮ ಪಂಚಾಯತ ಮಾಜಿ ಮತ್ತು ಹಾಲಿ ಅಧ್ಯಕ್ಷರು, ಸದಸ್ಯರು, ವಿವಿಧ ಬಹುಮಾನ ಪ್ರಾಯೋಜಕರು, ಗಣ್ಯರು, ಅತಿಥಿಗಳಾಗಿ ಉಪಸ್ಥಿತರಿರುವರು. ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ತಂಡಗಳು ಇಲ್ಲಿಯ ಯಂಗ್ ಸ್ಟಾರ್ ಕಬ್ಬಡ್ಡಿ ತಂಡದ ಸಂಯೋಜಕರಾದ ಮೊಬೈಲ್: 8431228820, 7483788927, 9141125704, 9591964022 ಸಂಪರ್ಕಿಸಬೇಕೆಂದು ಸ್ಥಳೀಯ ಕಬ್ಬಡ್ಡಿ ಪಂದ್ಯಾವಳಿ ಆಯೋಜಕರು ಪತ್ರಿಕಾ ಪ್ರಕಟನೆಗೆ ತಿಳಿಸಿದ್ದಾರೆ.