ಬೆಟಗೇರಿ:ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ಗ್ರಾಮದ ವಿವಿಡಿ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಕರೊನಾ ಹಿನ್ನಲೆಯಲ್ಲಿ ಸರ್ಕಾರ ನಿರ್ದೇಶಿಸಿದ ಮಾರ್ಗಸೂಚಿಗನುಸಾರ ಜು.19 ರಂದು ಗಣಿತ, ವಿಜ್ಞಾನ, ಸಮಾಜ ವಿಷಯದ ಪರೀಕ್ಷೆ ಯಶ್ವಸಿಯಾಗಿ ನಡೆಯಿತು.
ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ 10 ಜನ ವಲಸೆ ಬಂದ ವಿದ್ಯಾರ್ಥಿಗಳ ಸೇರಿ ಒಟ್ಟು 274 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದರು. ಇಲ್ಲಿಯ ಪರೀಕ್ಷಾ ಕೇಂದ್ರದಲ್ಲಿ 23 ಪರೀಕ್ಷಾ ಕೊಠಡಿ, 25 ಜನ ಪರೀಕ್ಷಾ ಕೊಠಡಿ ಮೇಲ್ವಿಚಾರಕರು, ಒಬ್ಬರು ಸ್ಥಾನಿಕ ವಿಕ್ಷಕ ಜಾಗೃತ ದಳ, ಪರೀಕ್ಷಾ ಮುಖ್ಯ ಅಧಿಕ್ಷಕ ಒಬ್ಬರು, ಓರ್ವ ಕಸ್ಟೊಡಿಯನ್, ಪರೀಕ್ಷಾ ಕೇಂದ್ರದ ಒಬ್ಬರು ಸಹಾಯಕರು ಕಾರ್ಯನಿರ್ವಹಿಸಿದರು.
ಕರೊನಾ ಸೋಂಕು ನಿಯಂತ್ರಣ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಕಟ್ಟುನಿಟ್ಟಾಗಿ ಇಲ್ಲಿಯ ಪರೀಕ್ಷಾ ಕೇಂದ್ರದಲ್ಲಿ ಅನುಸರಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ ನೀಷೆದಾಜ್ಞೆ ಜಾರಿಗೊಳಿಸಲಾಗಿದೆ. ನಕಲು ನಡೆಯದಂತೆ ಸಿಸಿ ಕ್ಯಾವiರಾ ಹಾಗೂ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಪೋಲಿಸ್ ಬಂದೋಬಸ್ತ್ ವ್ಯವಸ್ಥೆ ನಿಯೋಜನೆ ಮಾಡಲಾಗಿದೆ ಎಂದು ಸ್ಥಳೀಯ ಪರೀಕ್ಷಾ ಕೇಂದ್ರದ ಮುಖ್ಯ ಅಧಿಕ್ಷಕ ರಮೇಶ ಅಳಗುಂಡಿ ತಿಳಿಸಿದ್ದಾರೆ.
ಪರೀಕ್ಷಾ ಅವಧಿ ಮುಗಿದ ಬಳಿಕ ಪ್ರಶ್ನೆಗಳಿಗೆ ಉತ್ತರಿಸಿರುವ ಅಂಕಗಳ ಕುರಿತು ವಿದ್ಯಾರ್ಥಿಗಳು ತಮ್ಮ ತಮ್ಮಲ್ಲಿ ಲೆಕ್ಕ ಮಾಡುತ್ತಾ ನಗು ಮೊಗದಲ್ಲಿ ಪರೀಕ್ಷಾ ಕೇಂದ್ರದ ಕೊಠಡಿಯಿಂದ ಹೊರ ಬಂದರು.