ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಬೆಟಗೇರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಶಂಕರಾನಂದ ಮುಧೋಳ ಆಯ್ಕೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಶಂಕರಾನಂದ ಶಿವಲಿಂಗಪ್ಪ ಮುಧೋಳ ಅವರು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದ್ದಾರೆ.
ಶೈಕ್ಷಣಿಕ ಜಿಲ್ಲೆ ಚಿಕ್ಕೋಡಿಯಲ್ಲಿ ಅ.28ರಂದು ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲೆಯ ಕ್ರೀಡಾಕೂಟದ 600 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡು ಬೆಟಗೇರಿ ಗ್ರಾಮಕ್ಕೆ ಹಾಗೂ ಸ್ಥಳೀಯ ಪ್ರಾಥಮಿಕ ಶಾಲೆಗೆ ಕೀರ್ತಿ ತಂದಿದ್ದಾನೆ.
ಇಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ ಮುಖ್ಯಶಿಕ್ಷಕ ವೈ.ಸಿ.ಶೀಗಿಹಳ್ಳಿ, ಶಿಕ್ಷಕರು, ಶಿಕ್ಷಣಪ್ರೇಮಿಗಳು, ಕ್ರೀಡಾಭಿಮಾನಿಗಳು 600ಮೀ. ಓಟದ ಸ್ಪರ್ಧೆಯ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡು ಸಾಧನೆಗೈದ ಶಾಲೆಯ ವಿದ್ಯಾರ್ಥಿ ಶಂಕರಾನಂದ ಮುಧೋಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.