Breaking News
Home / Recent Posts / ಬೆಟಗೇರಿಯಲ್ಲಿ ನ.1ರಂದು 5 ಕಿ.ಮೀ ಮುಕ್ತ ಓಟದ ಸ್ಪರ್ಧೆ

ಬೆಟಗೇರಿಯಲ್ಲಿ ನ.1ರಂದು 5 ಕಿ.ಮೀ ಮುಕ್ತ ಓಟದ ಸ್ಪರ್ಧೆ

Spread the love

ಬೆಟಗೇರಿಯಲ್ಲಿ ನ.1ರಂದು 5 ಕಿ.ಮೀ ಮುಕ್ತ ಓಟದ ಸ್ಪರ್ಧೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಡಾ.ಬೆಟಗೇರಿ ಕೃಷ್ಣಶರ್ಮ ಸೈನಿಕ ತರಬೇತಿ ಕೇಂದ್ರ ಇವರ ಸಹಯೋಗದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ನ.1ರಂದು ಸಾಯಂಕಾಲ 4 ಗಂಟೆಗೆ 5 ಕಿ.ಮೀ ಮುಕ್ತ ಓಟದ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
ಸ್ಥಳೀಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮುಕ್ತ ಓಟದ ಸ್ಪರ್ಧೆಯ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ, ಹಣಮಂತ ವಡೇರ ದಿವ್ಯ ಸಾನಿಧ್ಯ, ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಉದ್ಘಾಟನೆ ನೆರವೇರಿಸಲಿದ್ದಾರೆ. ತಾಪಂ ಮಾಜಿ ಸದಸ್ಯ ಲಕ್ಷ್ಮಣ ಚಂದರಗಿ, ಗ್ರಾಪಂ ಅಧ್ಯಕ್ಷೆ ಸಾಂವಕ್ಕ ಬಾಣಸಿ, ತಾಪಂ ಮಾಜಿ ಸದಸ್ಯ ಬಸವಂತ ಕೋಣಿ, ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ, ಗ್ರಾಪಂ ಉಪಾಧ್ಯಕ್ಷ ಶಿವನಪ್ಪ ಮಾಳೇದ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಇಲ್ಲಿಯ ಗ್ರಾಪಂ ಪಿಡಿಒ ಎಚ್.ಎನ್.ಬಾವಿಕಟ್ಟಿ,   ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ, ಮುಕ್ತ ಓಟದ ಸ್ಪರ್ಧೆಗೆ ವಿವಿಧ ಬಹುಮಾನ, ಸಹಾಯ, ಸಹಕಾರ ನೀಡಿದ ಗಣ್ಯರು, ಕ್ರೀಡಾಭಿಮಾನಿಗಳು, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಆಡಳಿತ ಮಂಡಳಿ ಸದಸ್ಯರು, ಸ್ಥಳೀಯ ಹಿರಿಯ ನಾಗರಿಕರು ಅತಿಥಿಗಳಾಗಿ ಉಪಸ್ಥಿತರಿರುವರು. ಸ್ಪಧೆಯಲ್ಲಿ ವಿಜೇತರಾದವರಿಗೆ ಆಕರ್ಷಕ ನಗದು ಸೇರಿದಂತೆ ವಿವಿಧ ಬಹುಮಾನಗಳನ್ನು ಕೊಡಲಾಗುವುದು. ಓಟದ ಸ್ಪರ್ಧೆಯ ಕುರಿತು ಹೆಚ್ಚಿನ ಮಾಹಿತಿಗೆ ಮೊ.ನಂ: 8247044676, 9743896259, 7338005946 ಸಂಪರ್ಕಿಸಬೇಕೆಂದು ಮುಕ್ತ ಓಟದ ಸ್ಪರ್ಧೆ ಆಯೋಜಕ, ಮಾಜಿ ಸೈನಿಕ ಮುತ್ತೆಪ್ಪ ನೀಲಣ್ಣವರ ಪತ್ರಿಕಾ ಪ್ರಕಟನೆಗೆ ತಿಳಿಸಿದ್ದಾರೆ.


Spread the love

About inmudalgi

Check Also

ಬಸವರಾಜ ಪಾಟೀಲ ರಾಜ್ಯ ಮಟ್ಟದ ಗುಂಡು ಎಸೆತ ಸ್ಪರ್ಧೆಗೆ ಆಯ್ಕೆ

Spread the love ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಸ್.ವೈ.ಸಿ ಶಿಕ್ಷಣ ಸಂಸ್ಥೆಯ ಶ್ರೀ ಸದ್ಗುರು ಯಾಲ್ಲಾಲಿಂಗ ಸ್ವತಂತ್ರ ಪದವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ