ಪ್ರತಿಯೊಬ್ಬರೂ ಧರ್ಮದ ದಾರಿಯಲ್ಲಿ ನಡೆಯಬೇಕು : ಕಾಶಿಪೀಠದ ಜಗದ್ಗುರು.ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು
ಬೆಟಗೇರಿ:ಭಾರತ ದೇಶ ಸರ್ವ ಜಾತಿ, ಧರ್ಮ, ದೇವರು ಹಾಗೂ ಸಂಸ್ಕøತಿ, ಸಂಪ್ರದಾಯಗಳ ಬಿಡಾಗಿದೆ. ದೇವರುಗಳ ಮೇಲೆ ನಂಬಿಕೆ, ಶ್ರೇದ್ಧೆ, ಭಯ, ಭಕ್ತಿಯನ್ನು ಹೊಂದಿದ ಜನರು ನಮ್ಮ ದೇಶದಲ್ಲಿ ಮಾತ್ರ ಇದ್ದಾರೆ. ಹೀಗಾಗಿ ಭಾರತ ದೇಶ ಶ್ರೇಷ್ಠ ಧಾರ್ಮಿಕ ಪರಂಪರೆ ಹೊಂದಿದೆ ಎಂದು ಕಾಶಿಪೀಠದ ಶ್ರೀಮತ್ ಕಾಶಿಜ್ಞಾನ ಸಿಂಹಾಸನಾಧೀಶ್ವರ ಶ್ರೀಶ್ರೀಶ್ರೀ 1008 ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ ಡಿ.27ರಂದು ನಡೆದ 25ನೇ ವರ್ಷದ ಅಯ್ಯಪ್ಪ ಸ್ವಾಮಿ ಮಹಾಪೂಜೆ, ಕಾಶಿಪೀಠದ ಸಿಂಹಾಸನಾಧೀಶ್ವರ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ಹಾಗೂ ಧರ್ಮಸಭೆಯ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಪ್ರತಿಯೊಬ್ಬರೂ ಧರ್ಮದ ದಾರಿಯಲ್ಲಿ ನಡೆಯಬೇಕು. ಸದ್ಗುಣಗಳ ಮನೋಭಾವ ಕೊಡು ಅಂತಾ ದೇವರಲ್ಲಿ ಬೇಡಿಕೊಳ್ಳಿರಿ ಎಂದರು.
ಶಬರಿಮಲೆ ಅಯ್ಯಪ್ಪಸ್ವಾಮಿ ಬದುಕಿನÀ ಚರಿತ್ರೆ, ಪವಾಡ ಕುರಿತು ವಿವರಿಸಿದರು. ಸತತ 25 ವರ್ಷಗಳಿಂದ ಅಯ್ಯಪ್ಪಸ್ವಾಮಿ ಮಹಾಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವ ಸ್ಥಳೀಯ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯವರ ಕಾರ್ಯ ಶ್ಲಾಘನೀಯವಾಗಿz.É ಬೆಟಗೇರಿ ಗ್ರಾಮ ಸುಕ್ಷೇತ್ರವಾಗಿ ಕಂಗೊಳಿಸಲಿ. ಈ ಅಯ್ಯಪ್ಪಸ್ವಾಮಿ ಮಹಾಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನನಗೆ ನನ್ನ ಊರಿನಲ್ಲಿ ನಡೆಯುತ್ತಿದ್ದ ಅಯ್ಯಪ್ಪಸ್ವಾಮಿ ಮಹಾಪೂಜೆ ಹಾಗೂ ನನ್ನ ಬಾಲ್ಯದ ದಿನಗಳನ್ನು ನೆನೆಪಿಸಿಕೊಳ್ಳುವಂತೆ ಬೆಟಗೇರಿ ಗ್ರಾಮದವರು ಮಾಡಿದ್ದಿರಿ, ಅಯ್ಯಪ್ಪಸ್ವಾಮಿ ಮಾಲಾಧಾರಿಗಳು 48 ದಿನಗಳ ಕಾಲ ವೃತಾಚರಣೆಗೈದು ಅಯ್ಯಪ್ಪಸ್ವಾಮಿ ದರ್ಶನ ಪಡೆದ ಬಳಿಕವೂ ಸಹ ದುಶ್ಚಟಗಳಿಂದ ದೂರವಿರಬೇಕು ಎಂದು ಕಾಶಿಪೀಠದ ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಅಭಿಪ್ರಾಯಿಸಿದರು.
ಯುವನಾಯಕ ಸರ್ವೋತ್ತಮ ಜಾರಕಿಹೊಳಿ ಉದ್ಘಾಟನೆ ನೆರವೇರಿಸಿ ಮಾತನಾಡಿ, ಬೆಟಗೇರಿ ಗ್ರಾಮದಲ್ಲಿ ನಡೆಯುವ ಧಾರ್ಮಿಕ ಮತ್ತು ವಿವಿಧ ಕಾರ್ಯಕ್ರಮಗಳಿಗೆ ಸ್ಥಳೀಯ ಗ್ರಾಮಸ್ಥರು ನೀಡುತ್ತಿರುವ ಸಹಾಯ ಸಹಕಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಅಯ್ಯಪ್ಪಸ್ವಾಮಿ ಬದುಕಿನ ಪವಾಡ, ಸಾಧನೆ, ಮಾಲಾಧಾರಿಗಳ 48 ದಿನಗಳ ವೃತಾಚರಣೆ ಕುರಿತು ಮಾತನಾಡಿದರು. ಸುಣಧೋಳಿಯ ಅಭಿನವ ಶಿವಾನಂದ ಸ್ವಾಮಿಜಿ, ಮಮದಾಪೂರದ ಮೌನಮಲ್ಲಿಕಾರ್ಜುನ ಸ್ವಾಮಿಜಿ ಸಮ್ಮುಖ ವಹಿಸಿ ಮಾತನಾಡಿದರು.
ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ, ಸಿದ್ದರೂಢ ವಡೇರ, ಅಯ್ಯಪ್ಪಸ್ವಾಮಿ ಮಾಲಾಧಾರಿ ಗುರುಸ್ವಾಮಿಗಳಾದ ವೀರನಾಯ್ಕ ನಾಯ್ಕರ, ಬಸವರಾಜ ಬೆಟಗೇರಿ ನೇತೃತ್ವ, ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಅಧ್ಯಕ್ಷತೆ ವಹಿಸಿದ್ದರು. ತಾಪಂ ಮಾಜಿ ಸದಸ್ಯ ಲಕ್ಷ್ಮಣ ನೀಲನ್ನವರ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಇಲ್ಲಿಯ ಅಯ್ಯಪ್ಪಸ್ವಾಮಿ ಸೇವಾ ಸಮಿತಿ ವತಿಯಿಂದ ಶ್ರೀಗಳು, ಗಣ್ಯರು, 25ವರ್ಷ ಪೂರೈಸಿದ ಮಾಲಾಧಾರಿ ಗುರುಸ್ವಾಮಿ ಹಾಗೂ ದಾನಿಗಳನ್ನು ಸತ್ಕರಿಸಿದರು.
ವೈಭವದಿಂದ ನಡೆದ ವಿವಿಧ ಕಾರ್ಯಕ್ರಮಗಳು: ಮಂಗಳವಾರದಂದು ಮುಂಜಾನೆ 10 ಗಂಟೆಗೆ ಅಯ್ಯಪ್ಪಸ್ವಾಮಿ ಮಹಾಪೂಜೆ ಸಮಾರಂಭಕ್ಕೆ ಆಗಮಿಸಿದ ಮಾಲಾಧಾರಿಗಳನ್ನು ಬರಮಾಡಿಕೊಳ್ಳಲಾಯಿತು. ಸಂಜೆ 5 ಗಂಟೆಗೆ ಅಯ್ಯಪ್ಪಸ್ವಾಮಿ ಮೂರ್ತಿಯೊಂದಿಗೆ ಆನೆ, ಅಶ್ವ ಸೇರಿದಂತೆ ಸುಮಂಗಲೆಯರ ಆರತಿ, ಕುಂಭಮೇಳ ಸಕಲ ಕಲಾ ತಂಡ, ವಾದ್ಯ ಮೇಳಗಳೊಂದಿಗೆ ಇಲ್ಲಿಯ ವೀರಭದ್ರೇಶ್ವರ ದೇವಾಸ್ಥಾನದಿಂದ ಅಯ್ಯಪ್ಪಸ್ವಾಮಿ ಸನ್ನಿದಾನದ ತನಕ ಕಾಶಿಪೀಠದ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ಹಾಗೂ ಅಯ್ಯಪ್ಪ ಸ್ವಾಮಿ ಭಾವಚಿತ್ರದ ಭವ್ಯ ಮೆರವಣಿಗೆ ವೈಭವದಿಂದ ನಡೆಯಿತು. ಅಯ್ಯಪ್ಪಸ್ವಾಮಿ ಭಕ್ತಿ ಗೀತೆಗಳಿಗೆ ಆನೆ ಹಾಗೂ ಕುದುರೆ ಹೆಜ್ಜೆ ಹಾಕಿ ಎಲ್ಲರನ್ನೂ ಆಶ್ಚರ್ಯಚಕಿತರನ್ನಾಗಿಸಿದವು. ಸಂಜೆ 7 ಗಂಟೆಗೆ ಅಗ್ನಿಪೂಜೆ, ಮಾಲಾಧಾರಿಗಳಿಂದ ಬೆಂಕಿಪಾದ ನಡೆಯುವುದು, ಅಯ್ಯಪ್ಪಸ್ವಾಮಿ ಮಹಾಪೂಜೆ, ಮಹಾಪ್ರಸಾದ ಜರುಗಿದ ಬಳಿಕ ಪ್ರಸಕ್ತ ವರ್ಷದ ಕಾರ್ಯಕ್ರಮ ಸಮಾರೂಪಗೊಂಡಿತು.
ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಗ್ರಾಪಂ, ವಿವಿಧ ಸಂಘ, ಸಂಸ್ಥೆಗಳ ಹಾಲಿ ಮತ್ತು ಮಾಜಿ ಅಧ್ಯಕ್ಷರು, ಸದಸ್ಯರು, ಗಣ್ಯರು, ಸಂತರು, ಶರಣರು, ವೀರಭದ್ರೇಶ್ವರ ದೇವರ ಪುರವಂತರು, ನೂರಾರು ಜನ ಅಯ್ಯಪ್ಪಸ್ವಾಮಿ ಮಾಲಾಧಾರಿ ಗುರುಸ್ವಾಮಿಗಳು, ಮಾಲಾಧಾರಿಗಳು, ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ಇದ್ದರು. ಬಸವರಾಜ ಪಣದಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು, ರಾಜು ಪತ್ತಾರ ಕೊನೆಗೆ ವಂದಿಸಿದರು.