Breaking News
Home / Recent Posts / ಫೆ.5ರಂದು 300ನೇ ಬಸವ ಸ್ಮøತಿ ಮಾಸಿಕ ಶಿವಾನುಭವ ಕಾರ್ಯಕ್ರಮ

ಫೆ.5ರಂದು 300ನೇ ಬಸವ ಸ್ಮøತಿ ಮಾಸಿಕ ಶಿವಾನುಭವ ಕಾರ್ಯಕ್ರಮ

Spread the love

ಬೆಟಗೇರಿ:ಸಮೀಪದ ಮಮದಾಪೂರ ಗ್ರಾಮದ ಮೌನ ಮಲ್ಲಿಕಾರ್ಜುನ ಮಠದಲ್ಲಿ 300ನೇ ಬಸವ ಸ್ಮøತಿ ಮಾಸಿಕ ಶಿವಾನುಭವ ಕಾರ್ಯಕ್ರಮ ರವಿವಾರ ಫೆ.5ರಂದು ಸಂಜೆ 7 ಗಂಟೆಗೆ ನಡೆಯಲಿದೆ.
ಇಲ್ಲಿಯ ಮೌನ ಮಲ್ಲಿಕಾರ್ಜುನ ಮಠದ ಮೌನ ಮಲ್ಲಿಕಾರ್ಜುನ ಮಹಾಶಿವಯೋಗಿಗಳು ಕಾರ್ಯಕ್ರಮದ ಅಧ್ಯಕ್ಷತೆ, ಕೂಡಲಸಂಗಮ ಬಸವಧರ್ಮಪೀಠದ ಮಹಾಜಗದ್ಗುರು ಡಾ.ಮಾತೆ ಗಂಗಾದೇವಿ ಅವರು ದಿವ್ಯ ಸಾನಿಧ್ಯ, ಕೂಡಲಸಂಗಮದ ಮಾತೋಶ್ರೀ ಬಸವರತ್ನಾದೇವಿ ಮಾತಾಜಿ, ಚುಳಕಿಯ ಶೇಖರಯ್ಯ ಸ್ವಾಮೀಜಿ ಸಮ್ಮುಖ ವಹಿಸಲಿದ್ದಾರೆ. ಮೂಡಲಗಿಯ ಸದಾಶಿವ ತಬಲಟ್ಟಿ ಉಪನ್ಯಾಸ ನೀಡಲಿದ್ದಾರೆ. ಆಗಮಿತ ನಾಡಿನ ಸಕಲ ಹರ-ಗುರು, ಚರಮೂರ್ತಿಗಳ ಸಮ್ಮುಖದಲ್ಲಿ, ಆಗಮಿತ ಗಣ್ಯರ ಅತಿಥಿ ಸ್ಥಾನದ ಉಪಸ್ಥಿತಿಯಲ್ಲಿ ಪ್ರವಚನ ಜರುಗಲಿದೆ.
ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಸಂತ-ಶರಣರು, ಆಧ್ಯಾತ್ಮ ಪ್ರವೀಣರು, ಗಣ್ಯರು ಸೇರಿದಂತೆ ಶ್ರೀಮಠದ ಕಾರ್ಯಕ್ರಮದ ಆಯೋಜಕ ಸಮಿತಿ ಪದಾಧಿಕಾರಿಗಳು, ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸ್ಥಳೀಯ ಮೌನ ಮಲ್ಲಿಕಾರ್ಜುನ ಮಠದ ಕಾರ್ಯಕ್ರಮ ಆಯೋಜಕ ಸಮಿತಿ ಸಂಚಾಲಕ ಮಂಜುನಾಥ ಶರಣರು ಪ್ರತಿಕಾ ಪ್ರಕಟನೆಗೆ ತಿಳಿಸಿದ್ದಾರೆ.


Spread the love

About inmudalgi

Check Also

ಸಾಹಿತಿ ಚಿದಾನಂದ ಹೂಗಾರ ರವರ ಭಟ್ಟಿನೀಯ ಭ್ರಾಂತಿ ಚಿತ್ತ* ಕವನ ಸಂಕಲನ ಲೋಕಾರ್ಪಣೆ

Spread the loveಮೂಡಲಗಿಯ ಚೈತನ್ಯ ಸೊಸೈಟಿಯಲ್ಲಿ ಮೂಡಲಗಿ ತಾಲ್ಲೂಕು ಚುಸಾಪ ಮತ್ತು ಮಲ್ಲಿಕಾರ್ಜುನ ಪ್ರಕಾಶನದಿಂದ ಏರ್ಪಡಿಸಿದ ಚಿದಾನಂದ ಹೂಗಾರ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ