Breaking News
Home / Recent Posts / 2ಎ ಮೀಸಲಾತಿಗಾಗಿ ಬೆಟಗೇರಿ ಗ್ರಾಮದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ

2ಎ ಮೀಸಲಾತಿಗಾಗಿ ಬೆಟಗೇರಿ ಗ್ರಾಮದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ

Spread the love

2ಎ ಮೀಸಲಾತಿಗಾಗಿ ಬೆಟಗೇರಿ ಗ್ರಾಮದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ಸ್ಥಳೀಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಎಲ್ಲಾ ಮುಖ್ಯ ರಸ್ತೆಗಳನ್ನು ಬಂದ್ ಮಾಡಿ ಪ್ರತಿಭಟನೆ ಮಾಡಲಾಯಿತು.


ಬೆಟಗೇರಿ ಗ್ರಾಮದ ಪಂಚಮಸಾಲಿ ಸಮಾಜದ ಮುಖಂಡ, ನ್ಯಾಯವಾದಿ ಎಂ.ಐ,ನೀಲನ್ನವರ ಮಾತನಾಡಿ, ಕೂಡಲಸಂಗಮ ಧರ್ಮಕ್ಷೇತ್ರದ ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ ಅವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಶಿಕ್ಷಣ ಮತ್ತು ಉದ್ಯೋಗ ಹಿತದೃಷ್ಠಿಯಿಂದ ಪಂಚಮಸಾಲಿ ಲಿಂಗಾಯತರನ್ನು 2ಎ ವರ್ಗದಲ್ಲಿ ಸೇರ್ಪಡೆ ಮಾಡಲು ಹೋರಾಟ ನಿರಂತರವಾಗಿದ್ದು, ಪಂಚಮಸಾಲಿ ಲಿಂಗಾಯತರಿಗೆ 2ಎ ಮೀಸಲಾತಿ ನೀಡುವ ಭರವಸೆಯಂತೆ ರಾಜ್ಯ ಸರ್ಕಾರ ನಡೆದುಕೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
2ಎ ಮೀಸಲಾತಿಗಾಗಿ ಈಗಾಗಲೇ ಸಾಕಷ್ಟು ಹೋರಾಟ ಮಾಡುತ್ತಾ ಬಂದಿದ್ದೇವೆ. ಲಿಂಗಾಯತ ಪಂಚಮಸಾಲಿ ವರ್ಗದವರನ್ನು 2ಎ ಮೀಸಲಾತಿ ಪಟ್ಟಿಯಲ್ಲಿ ಸೇರ್ಪಡೆ ಮಾಡುವಂತೆ ಬೆಟಗೇರಿ ಗ್ರಾಮದ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ರಾಜ್ಯ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸ್ಥಳೀಯ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ಒತ್ತಾಯಿಸಿದರು. ನಮ್ಮ ಪಂಚಮಸಾಲಿ ಸಮಾಜಕ್ಕೆ ನ್ಯಾಯ ಸಿಗುವವರೆಗೂ ನಾವು ಇನ್ನೂ ಮುಂದೆ ನಿರಂತರವಾಗಿ ಉಗ್ರ ಹೋರಾಟ ಮುಂದುವರೆಸುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದರು.
ಸ್ಥಳೀಯ ಅಶ್ವಾರೂಢ ಬಸವೇಶ್ವರ ವೃತ್ತದಲ್ಲಿ ವಿಶ್ವಗುರು ಬಸವಣ್ಣ ಮೂರ್ತಿಗೆ ಪೂಜೆ, ಪುಷ್ಪಾರ್ಪನೆ ಸಮರ್ಪಿಸಿದ ಬಳಿಕ ಬೆಟಗೇರಿ ಗ್ರಾಮದ ಡಾ.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಸ್ಥಳೀಯ ಲಿಂಗಾಯತ ಪಂಚಮಸಾಲಿ ಸಮಾಜದ ಯುವ ಮುಂಂಡರಾದ ಈರಣ್ಣ ಬಳಿಗಾರ, ರಮೇಶ ಮುಧೋಳ, ಅರುಣ ಸವತಿಕಾಯಿ, ಬಸವರಾಜ ಪಣದಿ ಪ್ರತಿಭಟನೆ ಕುರಿತು ಮಾತನಾಡಿದರು.
ಬಸವಂತ ದೇಯಣ್ಣವರ, ಲಕ್ಷ್ಮಣ ನೀಲಣ್ಣವರ, ಈರಪ್ಪ ದೇಯಣ್ಣವರ, ಈರಯ್ಯ ಹಿರೇಮಠ, ಬಸಪ್ಪ ದೇಯಣ್ಣವರ, ಚಂದ್ರಶೇಖರ ನೀಲಣ್ಣವರ, ಶಿವನಪ್ಪ ಮಾಳೇದ, ರಾಚಪ್ಪ ಮುರಗೋಡ, ಶ್ರೀಧರ ದೇಯಣ್ಣವರ, ಮಲ್ಲಪ್ಪ ಕಂಬಿ, ಬಸವರಾಜ ಮಾಳೇದ, ಈರಣ್ಣ ಸಿದ್ನಾಳ, ಶಿವು ದೇಯಣ್ಣವರ, ಮುತ್ತೆಪ್ಪ ನೀಲಣ್ಣವರ, ಗುಳಪ್ಪ ಪಣದಿ, ಮಲ್ಲಿಕಾರ್ಜುನ ನೀಲಣ್ಣವರ, ಭರಮಪ್ಪ ಪೂಜೇರ, ರಾಮಣ್ಣ ಬಳಿಗಾರ, ಈರಪ್ಪ ಕಂಬಾರ, ಶಿವಪ್ಪ ಕಂಬಾರ, ಬಸಪ್ಪ ಬಳಿಗಾರ, ಸ್ಥಳೀಯ ಲಿಂಗಾಯತ ಪಂಚಮಸಾಲಿ ಸಮಾಜದ ಮುಖಂಡರು, ಹಿರಿಯ ನಾಗರಿಕರು, ಯುವಕರು, ಗ್ರಾಮಸ್ಥರು, ಇತರರು ಇದ್ದರು.

 


Spread the love

About inmudalgi

Check Also

ಖಾನಟ್ಟಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರ ಸಂಘ ಪ್ರಶಸ್ತಿ

Spread the loveಮೂಡಲಗಿ : ಬೆಳಗಾವಿ ಜಿಲ್ಲಾ ಉತ್ತಮ ಸಹಕಾರಿ ಸಂಘ ಪ್ರಶಸ್ತಿ  ಬೆಳಗಾವಿಯಲ್ಲಿ ನಡೆದ 71ನೇ ಅಖಿಲ ಭಾರತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ