ಎಲ್ಲಕ್ಕಿಂತ ಬೆಟಗೇರಿ ಗ್ರಾಮಸ್ಥರ ಪ್ರೀತಿ, ಅಭಿಮಾನ ದೊಡ್ಡದು: ಡಾ.ರಾಜೇಂದ್ರ ಸಣ್ಣಕ್ಕಿ
ಬೆಟಗೇರಿ:ಚುನಾಯಿತ ಜನಪ್ರತಿನಿಧಿಗಳು ತಾವು ಆಯ್ಕೆಗೊಂಡ ಕ್ಷೇತ್ರದಲ್ಲಿ ಅಭಿವೃದ್ಧಿ ಪರ ಕೆಲಸ ಕೈಗೊಳ್ಳಬೇಕು. ಎಲ್ಲಕ್ಕಿಂತ ಬೆಟಗೇರಿ ಗ್ರಾಮಸ್ಥರ ಪ್ರೀತಿ, ಅಭಿಮಾನ ದೊಡ್ಡದು ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು.
ಬೆಟಗೇರಿ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಸೋಮವಾರ ಜು.26ರಂದು ಆಯೋಜಿಸಿದ ಜಿಲ್ಲಾ ಮತ್ತು ತಾಲೂಕಾ ಪಂಚಾಯತಿ ಸದಸ್ಯರ ಸತ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಜನಪ್ರತಿನಿಧಿಗಳು ಜನರ ಆಶೋತ್ತರಗಳಿಗೆ ಸಾಧ್ಯವಾದಷ್ಟು ಸ್ಪಂದಿಸಿ, ಸಹಾಯ ಸಹಕಾರ ನೀಡಿ, ಜನರ ಪ್ರೀತಿ, ಗೌರವಕ್ಕೆ ಪಾತ್ರರಾಗಬೇಕು ಎಂದರು.
ಮೆಳವಂಕಿ ಜಿಪಂ ಸದಸ್ಯೆ ಶಶಿಕಲಾ ಸಣ್ಣಕ್ಕಿ, ಬೆಟಗೇರಿ ತಾಪಂ ಸದಸ್ಯ ಲಕ್ಷ್ಮಣ ನೀಲಣ್ಣವರ ಅವರನ್ನು ಸ್ಥಳೀಯ ಗ್ರಾಮ ಪಂಚಾಯ್ತಿ ವತಿಯಿಂದ ಸನ್ಮಾನಿಸಲಾಯಿತು. ಗ್ರಾಪಂ ಅಧ್ಯಕ್ಷೆ ಬಸವ್ವ ದೇಯಣ್ಣವರ ಅಧ್ಯಕ್ಷತೆ ವಹಿಸಿದ್ದರು. ಬಸವರಾಜ ಪಣದಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಗ್ರಾಪಂ ಉಪಾಧ್ಯಕ್ಷ ಬಸವಂತ ಕೋಣಿ, ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ, ಸುಭಾಷ ಜಂಬಗಿ, ರಾಮಣ್ಣ ನೀಲಣ್ಣವರ, ಸಿದ್ದಪ್ಪ ಬಾಣಸಿ, ಈರಪ್ಪ ಬಳಿಗಾರ, ಪಿಡಿಒ ಎಚ್.ಎನ್.ಬಾವಿಕಟ್ಟಿ, ಕಾರ್ಯದರ್ಶಿ ಗೌಡಪ್ಪ ಮಾಳೇದ, ಸುರೇಶ ಬಾಣಸಿ, ವಿಠಲ ಚಂದರಗಿ, ಗ್ರಾಪಂ ಸದಸ್ಯರು, ಸಿಬ್ಬಂದಿ, ಸ್ಥಳೀಯರು ಇತರರು ಇದ್ದರು.