ಮೇ.27ರಿಂದ ಬೆಟಗೇರಿ ಶ್ರೀ ಮಾರುತಿ ದೇವರ ಓಕುಳಿ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶನಿವಾರ ಮೇ.27ರಿಂದ ಮಂಗಳವಾರ ಮೇ.30ರವರೆಗೆ ಜರುಗಲಿದೆ.
ಮೇ.27ರಂದು ಮುಂಜಾನೆ 7ಗಂಟೆಗೆ ಸ್ಥಳೀಯ ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಕುಂಕುಮ ಮತ್ತು ಮಹಾಪೂಜೆ, ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡ ಪೂಜೆ, ನಂತರ ಕರಡಿ, ಹಲಗೆ ಮಜಲು ಸೇರಿದಂತೆ ಸಕಲ ವಾಧ್ಯಗಳ ವಾದನ, ಪಲ್ಲಕ್ಕಿ ಉತ್ಸವ ನಡೆಯಲಿದೆ.
ಮೇ.28ರಂದು ಮುಂಜಾನೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಅಭಿಷೇಕ, ಪೂಜೆ, ಸಾಯಂಕಾಲ 5 ಗಂಟೆಗೆ ನಡು ಓಕುಳಿ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಮೇ.29ರಂದು ಬೆಳಗ್ಗೆ7 ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಅಭಿಷೇಕ, ಪೂಜೆ ಬಳಿಕ ಮುಂಜಾನೆ 8 ಗಂಟೆಯಿಂದ ಪುರಜನರಿಂದ ಮಾರುತಿ ದೇವರ ದೇವಾಲಯದಲ್ಲಿ ಪೂಜೆ-ಪುನಸ್ಕಾರ, ನೈವೈದ್ಯ, ಹರಕೆ ಸಮರ್ಪಣೆ ನಡೆದು, ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡಕ್ಕೆ ಸ್ಥಳೀಯ ವಿವಿಧ ದೇವರÀ ಪಲ್ಲಕ್ಕಿ ಪ್ರದಕ್ಷೀಣೆ ಬಳಿಕ ಕಡೆ ಓಕಳಿ ನಡೆಯಲಿದ್ದು, ವಿವಿಧ ಪ್ರಾಣಿಗಳ ಸೊಗಿನ ಕುಣಿತದ ಪ್ರದರ್ಶನ, ಅದೇ ದಿನ ರಾತ್ರಿ 10.30ಕ್ಕೆ ಸ್ಥಳೀಯ ಜೈ ಹನುಮಾನ ನಾಟ್ಯ ಸಂಘದವರಿಂದ ಸಿಡಿದೆದ್ದ ಬೆಟಗೇರಿ ಹುಲಿಎಂಬ ಸಾಮಾಜಿಕ ನಾಟಕ ಪ್ರದರ್ಶನ ಜರುಗಲಿದೆ.
ಮೇ.30ರಂದು ಮುಂಜಾನೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಅಭಿಷೇಕ, ಪೂಜೆ, ಸಾಯಂಕಾಲ 4 ಗಂಟೆಗೆ ಜಂಗಿ ಕುಸ್ತಿಗಳು ನಡೆದ ಬಳಿಕ ಸಂಜೆ ಮಾರುತಿ ದೇವರ ದೇವಾಲಯಕ್ಕೆ ಪಲ್ಲಕ್ಕಿ ಪ್ರರ್ದಕ್ಷಣೆ ಕಾರ್ಯಕ್ರಮ ನಡೆಯಲಿದೆ ಎಂದು ಇಲ್ಲಿಯ ಮಾರುತಿ ದೇವರ ಓಕುಳಿ ಉತ್ಸವ ಆಚರಣಾ ಸಮಿತಿ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.