ತಪಸಿ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷೆಯಾಗಿ ಭಾಗವ್ವ ಗಲಗಲಿ ಆಯ್ಕೆ
ಬೆಟಗೇರಿ:ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಅವರ ಮಾರ್ಗದರ್ಶನದಂತೆ ಗೋಕಾಕ ತಾಲೂಕಿನ ತಪಸಿ ಗ್ರಾಮ ಪಂಚಾಯತಿ 2ನೇ ಅವಧಿಗೆ ಈಚೆಗೆ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷೆಯಾಗಿ ಭಾಗವ್ವ ದೇವಪ್ಪ ಗಲಗಲಿ ಅವಿರೂಧವಾಗಿ ಆಯ್ಕೆಯಾದರು.
ಹಿಂದುಳಿದ ಅ ವರ್ಗಕ್ಕೆ ಮೀಸಲಾಗಿದ್ದ ಇಲ್ಲಿಯ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಭಾಗವ್ವ ಗಲಗಲಿ ನೂತನ ಅಧ್ಯಕ್ಷರಾಗಿ ಅವಿರೂಧವಾಗಿ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಗಳ ಯಾವುದೇ ನಾಮಪತ್ರ ಸಲ್ಲಿಕೆಯಾಗದ್ದರಿಂದ ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಚುನಾವಣೆ ಮುಂದುಡಲಾಗಿದೆ ಎಂದು ಚುನಾವಣಾಧಿಕಾರಿ ಗೋಕಾಕ ಜಲಸಂಪನ್ಮೂಲ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಘುರಾಮ ಎಸ್.ಬಿ. ಅವರು ತಿಳಿಸಿದ್ದಾರೆ.
ಈ ವೇಳೆ ಸ್ಥಳೀಯ ಗ್ರಾಪಂ ಪಿಡಿಒ ಎಚ್.ಎನ್.ಭಾವಿಕಟ್ಟಿ, ಗ್ರಾಪಂ ಸರ್ವ ಸದಸ್ಯರು, ಸಿಬ್ಬಂದಿ, ಹಿರಿಯ ನಾಗರಿಕರು, ರಾಜಕೀಯ ಮುಖಂಡರು, ಗ್ರಾಮಸ್ಥರು ಇದ್ದರು.
IN MUDALGI Latest Kannada News