ಗೋಸಬಾಳ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅಮರ ವಡೇರ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಬೆಟಗೇರಿ:ಗೋಕಾಕ ತಾಲೂಕಿನ ಗೋಸಬಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಅಮರ ಮುತ್ತೆಪ್ಪ ವಡೇರ ಅವರು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದ್ದಾರೆ.
ಮೂಡಲಗಿಯಲ್ಲಿ ಇಚೆಗೆ ನಡೆದ ಚಿಕ್ಕೋಡಿ ಜಿಲ್ಲಾಮಟ್ಟದ ಪ್ರಾಥಮಿಕ ಶಾಲೆಯ ಕ್ರೀಡಾಕೂಟದ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡು ಬೆಟಗೇರಿ ಕ್ಲಸ್ಟರ್‍ಗೆ ಮತ್ತು ಗೋಸಬಾಳ ಗ್ರಾಮಕ್ಕೆ ಹಾಗೂ ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕೀರ್ತಿ ತಂದಿದ್ದಾನೆ.
ಇಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ ಮುಖ್ಯಶಿಕ್ಷಕ ಸಿದ್ರಾಮ ಲೋಕನ್ನವರ, ಶಿಕ್ಷಕರು, ಎಸ್‍ಡಿಎಮ್‍ಸಿ ಅಧ್ಯಕ್ಷ ಶಂಕರಯ್ಯ ಮಠದ, ಸದಸ್ಯರು, ಶಿಕ್ಷಣ ಪ್ರೇಮಿಗಳು, ಕ್ರೀಡಾಭಿಮಾನಿಗಳು ಚಕ್ರ ಎಸೆತ ಸ್ಪರ್ಧೆಯ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡ ಶಾಲೆಯ ಬಾಲಕ ಅಮರ ವಡೇರ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಅಭಿನಂದಿಸಿದ್ದಾರೆ.
IN MUDALGI Latest Kannada News