ಮಮದಾಪೂರ ಮೌನಮಲ್ಲಿಕಾರ್ಜುನ ಮಠದಲ್ಲಿ ಶ್ರೀದೇವಿ ಪುರಾಣ ಪ್ರವಚನ ಕಾರ್ಯಕ್ರಮ
ಬೆಟಗೇರಿ:ಗೋಕಾಕ ತಾಲೂಕಿನ ಮಮದಾಪೂರ ಗ್ರಾಮದ ಮೌನ ಮಲ್ಲಿಕಾರ್ಜುನ ಮಠದಲ್ಲಿ ಅ.15ರಂದು ನವರಾತ್ರಿಯ ಅಂಗವಾಗಿ ಶ್ರೀದೇವಿ ಪುರಾಣ ಪ್ರವಚನ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು.
ಶಿರಹಟ್ಟಿ ಫಕೀರೇಶ್ವರ ಸಂಸ್ಥಾನ ಮಠದ ಜಗದ್ಗುರು ಫಕೀರಸಿದ್ಧರಾಮ ಮಹಾಸ್ವಾಮಿಜಿ ದೀಪ ಹಚ್ಚುವುದರ ಮೂಲಕ ಪ್ರವಚನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸ್ಥಳೀಯ ಶ್ರೀಮಠದ ಮೌನಮಲ್ಲಿಕಾರ್ಜುನ ಮಹಾಶಿವಯೋಗಿಗಳು ಅಧ್ಯಕ್ಷತೆ ವಹಿಸಿದ್ದರು.
ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹರ-ಗುರು, ಚರಮೂರ್ತಿಗಳು, ಸಂತ-ಶರಣರು, ಆಧ್ಯಾತ್ಮ ಪ್ರವೀಣರು, ಗಣ್ಯರು ಸೇರಿದಂತೆ ಶ್ರೀ ದೇವಿ ಪುರಾಣ ಪ್ರವಚನ ಆಯೋಜಕ ಸಮಿತಿ ಪದಾಧಿಕಾರಿಗಳು, ಸದಸ್ಯರು, ಅಪಾರ ಸಂಖ್ಯೆಯಲ್ಲಿ ಶ್ರೀಮಠದ ಭಕ್ತರು ಇದ್ದರು. ಶ್ರೀದೇವಿಯ ಪುರಾಣ ಪ್ರವಚನ ಆಯೋಜಕ ಸಮಿತಿ ಸಂಚಾಲಕ ಮಂಜುನಾಥ ಶರಣರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.