ಮೌನಮಲ್ಲಿಕಾರ್ಜುನ ಮಠದಲ್ಲಿ ಶ್ರೀದೇವಿ ಪುರಾಣ ಪ್ರವಚನ ಮಂಗಲೋತ್ಸವ ಕಾರ್ಯಕ್ರಮ
*ಶಿರಹಟ್ಟಿ ಫಕೀರೇಶ್ವರ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ * ಮಾಸಿಕ ಶಿವಾನುಭವ
ಬೆಟಗೇರಿ:ಸಮೀಪದ ಮಮದಾಪೂರ ಗ್ರಾಮದ ಮೌನಮಲ್ಲಿಕಾರ್ಜುನ ಮಠದಲ್ಲಿ ಶರನ್ನವರಾತ್ರಿಯ ಪ್ರಯುಕ್ತ ಸಾಗಿಬರುತ್ತಿರುವ ಶ್ರೀದೇವಿ ಪುರಾಣ ಪ್ರವಚನ ಮಂಗಲೋತ್ಸವ ಮತ್ತು ಮಾಸಿಕ ಶಿವಾನುಭವ ಹಾಗೂ ಶಿರಹಟ್ಟಿ ಫಕೀರೇಶ್ವರ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಅ.28ರಂದು ಸಾಯಂಕಾಲ 4 ಗಂಟೆಗೆ ನಡೆಯಲಿದೆ.
ಮಂಗಲ ಧರ್ಮಸಭೆ ಸಂಜೆ 7 ಗಂಟೆಗೆ ನಡೆಯಲಿದ್ದು, ಸ್ಥಳೀಯ ಮೌನ ಮಲ್ಲಿಕಾರ್ಜುನ ಮಠದ ಮೌನಮಲ್ಲಿಕಾರ್ಜುನ ಶಿವಯೋಗಿಗಳು ಅಧ್ಯಕ್ಷತೆ, ಶಿರಹಟ್ಟಿ ಜಗದ್ಗುರು ಫಕೀರೇಶ್ವರ ಸಂಸ್ಥಾನಮಠದ ಜಗದ್ಗುರು ಫಕೀರಸಿದ್ಧರಾಮ ಮಹಾಸ್ವಾಮಿಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ಜಮಖಂಡಿ ಕಲ್ಯಾಣಮಠದ ಗೌರಿಶಂಕರ ಶಿವಾಚಾರ್ಯ ಸ್ವಾಮಿಜಿ, ಸುಳ್ಳ ಪಂಚಗ್ರಹ ಹಿರೇಮಠದ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮಿಜಿ ನೇತೃತ್ವ, ಚುಳಕಿ ಮಠದ ಶೇಖರಯ್ಯ ಸ್ವಾಮಿಜಿ, ಶಲವಡಿ ವೀರಯ್ಯ ಶಾಸ್ತ್ರೀಗಳು ಹಾಗೂ ಆಗಮಿತ ನಾಡಿನ ಸಕಲ ಹರ-ಗುರು, ಚರಮೂರ್ತಿಗಳ ಸಮ್ಮುಖದಲ್ಲಿ, ಆಗಮಿತ ಗಣ್ಯರ ಅತಿಥಿ ಸ್ಥಾನದ ಉಪಸ್ಥಿತಿಯಲ್ಲಿ ಪ್ರವಚನ ಜರುಗಲಿದೆ.
ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಸಂತ-ಶರಣರು, ಆಧ್ಯಾತ್ಮ ಪ್ರವೀಣರು, ಗಣ್ಯರು, ಶ್ರೀದೇವಿ ಪುರಾಣ ಪ್ರವಚನ ಕಾರ್ಯಕ್ರಮದ ಆಯೋಜಕ ಸಮಿತಿ ಪದಾಧಿಕಾರಿಗಳು, ಸದಸ್ಯರು ಪುರಾಣ ಪ್ರವಚನ ಮಂಗಲೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸ್ಥಳೀಯ ಶ್ರೀಮಠದ ಶ್ರೀದೇವಿ ಪುರಾಣ ಪ್ರವಚನ ಕಾರ್ಯಕ್ರಮ ಆಯೋಜಕ ಸಮಿತಿ ಸಂಚಾಲಕ ಮಂಜುನಾಥ ಶರಣರು ಪ್ರತಿಕಾ ಪ್ರಕಟನೆಗೆ ತಿಳಿಸಿದ್ದಾರೆ.