ಬೆಟಗೇರಿ:ಮಹಾಮಾರಿ ಕರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಸಂಕಲ್ಪ ತೊಟ್ಟಿರುವ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅರಭಾಂವಿ ಮತಕ್ಷೇತ್ರ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಸೋಂಕಿತರಿಗೆ ಔಷಧ ಕಿಟ್ ಮತ್ತು ಗ್ರಾಪಂಗಳಿಗೆ ಸೋಡಿಯಂ ಹೈಪೋಕ್ಲೋರೈಡ್ ವಿತರಿಸುತ್ತಿರುವ ಕಾರ್ಯ ಶ್ಲಾಘನೀಯವಾಗಿ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ರಾಜೇಂದ್ರ ಸಣ್ಣಕ್ಕಿ ಹೇಳಿದರು.
ಬೆಟಗೇರಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಮಂಗಳವಾರ ಮೇ.25ರಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಶಾಸಕರ ಪರವಾಗಿ ಸೋಂಕಿತರಿಗೆ ಔಷಧ ಕಿಟ್ ಹಾಗೂ ಸೋಡಿಯಂ ಹೈಪೋಕ್ಲೋರೈಡ್‍ನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಗ್ರಾಪಂ ಸಿಬ್ಬಂದಿಗೆ ವಿತರಿಸಿ ಮಾತನಾಡಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಅವಳಿ ತಾಲೂಕಿನಲ್ಲಿ ಕರೊನಾ ಸೋಂಕಿತರಿಗೆ ಕೋವಿಡ್ ಕೇರ್ ಸೆಂಟರ್ ತೆರೆದು ಸ್ವಂತ ವೆಚ್ಚದಲ್ಲಿ ಆಕ್ಸಿಜನ್ ನೀಡುತ್ತಿದ್ದಾರೆ ಎಂದರು.
ಗೋಕಾಕ, ಮಲ್ಲಾಪುರ ಪಿ.ಜಿ., ಮೂಡಲಗಿಗಳಲ್ಲಿ ಕೋವಿಡ್ ಕೇರ್ ಸೆಂಟರ್‍ಗಳನ್ನು ತೆರೆದು ಸೋಂಕಿತರಿಗೆ ಅಗತ್ಯ ವಸ್ತುಗಳನ್ನು ನೀಡುತ್ತಾ, ಪ್ರತಿ ಹಂತದಲ್ಲಿಯೂ ಅವರ ಆರೋಗ್ಯದ ಬಗ್ಗೆ, ಸಮಸ್ಯ್ಯೆಗಳ ಸ್ಪಂದನೆಗೆ ಹೆಲ್ಪ್‍ಲೈನ್ ವ್ಯವಸ್ಥೆಗೆ ಶಾಸಕರು ತಮ್ಮ ಕಛೇರಿ ಸಿಬ್ಬಂದಿ ನಿಯೋಜಿಸಿ ಜನಪರ ಕಾಳಜಿ ಮಾಡುತ್ತಿದ್ದಾರೆ. ಇಂತಹ ಶಾಸಕರನ್ನು ಪಡೆದಿರುವುದು ನಮ್ಮ ಸೌಭಾಗ್ಯವಾಗಿದೆ ಎಂದು ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು.
ಶಾಸಕರ ಕಛೇರಿ ಪ್ರತಿನಿಧಿ ನಿಂಗಪ್ಪ ಕುರಬೇಟ, ತಾಪಂ ಸದಸ್ಯ ಲಕ್ಷ್ಮಣ ನೀಲಣ್ಣವರ, ಗ್ರಾಪಂ ಉಪಾಧ್ಯಕ್ಷ ಬಸವಂತ ಕೋಣಿ, ಪಿಡಿಒ ಎಚ್.ಎನ್.ಬಾವಿಕಟ್ಟಿ, ಗ್ರಾಮಲೆಕ್ಕಾಧಿಕಾರಿ ಜೆ.ಎಮ್.ನದಾಫ್, ಅಡಿವೆಪ್ಪ ಕಂಕಾಳಿ, ಈಶ್ವರ ಬಳಿಗಾರ, ಬಸವರಾಜ ದೇಯಣ್ಣವರ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಗ್ರಾಪಂ ಸಿಬ್ಬಂದಿ, ಹಿರಿಯ ನಾಗರಿಕರು, ಗ್ರಾಪಂ ಸದಸ್ಯರು, ಇತರರು ಇದ್ದರು.