ಬೆಟಗೇರಿ:ಗ್ರಾಮದ ಪ್ರತಿಯೊಬ್ಬ ರೈತರು ಎರೆಹುಳು ತೊಟ್ಟಿ ನಿರ್ಮಿಸಿಕೊಂಡು ಸಾವಯವ ಕೃಷಿ ಮಾಡಬೇಕು. ಎರೆಹುಳು ರೈತನಿಗೆ ಮಿತ್ರವಾಗಿದೆ. ರೈತರು ತಮ್ಮ ಜಮೀನಿನ ಒಂದಿಷ್ಟು ಜಾಗೆಯಲ್ಲಿ ಪೌಷ್ಟಿಕ ತೋಟ ನಿರ್ಮಾಣ ಮಾಡಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಚ್.ಎನ್.ಭಾವಿಕಟ್ಟಿ ಹೇಳಿದರು.
ಬೆಟಗೇರಿ ಗ್ರಾಮ ಪಂಚಾಯತಿಯಲ್ಲಿ ರವಿವಾರದಂದು ನಡೆದ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ಜರುಗಿದÀ ಬಳಿಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಬೆಳಗಾವಿ ಜಿಪಂ, ಗೋಕಾಕ ತಾಪಂ ಹಾಗೂ ಬೆಟಗೇರಿ ಗ್ರಾಪಂ ಸಹಯೋಗದಲ್ಲಿ 75ನೇ ವರ್ಷದ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರೈತ ಬಂಧು ಹಾಗೂ ಪೌಷ್ಟಿಕ ತೋಟ ವಿಶೇಷ ಅಭಿಯಾನಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇಂದಿನ ದಿನಮಾನದಲ್ಲಿ ಬೆಳೆಗಳಿಗೆ ರಾಸಾಯನಿಕ ಗೊಬ್ಬರ, ಔಷಧಿ ಬಳಕೆಯಿಂದ ಭೂಮಿಯಲ್ಲಿರುವ ಸೂಕ್ಷ್ಮಾಣು ಜೀವಿಗಳು, ಎರೆಹುಳುಗಳು ನಾಶವಾಗುತ್ತಿವೆ. ಭೂಮಿ ತನ್ನ ಫಲವತ್ತತೆ ಕಳೆದುಕೊಳ್ಳುತ್ತಿದೆ. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣುದ್ಯೋಗ ಖಾತರಿ ಯೋಜನೆಯಡಿಯಲ್ಲಿ ಎರೆಹುಳು ತೊಟ್ಟಿ ನಿರ್ಮಾಣಕ್ಕೆ ಸರ್ಕಾರ ರೈತ ಬಂಧು ಅಭಿಯಾನದ ಮೂಲಕ ಸಹಾಯ ಧನ ನೀಡುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು, ಹೆಚ್ಚಿನ ಮಾಹಿತಿಗಾಗಿ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಹಾಗೂ ಸ್ಥಳೀಯ ಗ್ರಾಮ ಪಂಚಾಯತಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಬೇಕೆಂದು ಪಿಡಿಒ ಎಚ್.ಎನ್.ಭಾವಿಕಟ್ಟಿ ತಿಳಿಸಿದರು.
ಬೆಟಗೇರಿ ಗ್ರಾಪಂ ಅಧ್ಯಕ್ಷೆ ಬಸವ್ವ ದೇಯಣ್ಣವರ ಅವರು, 75ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿದ ಬಳಿಕ ರೈತ ಬಂಧು ಹಾಗೂ ಪೌಷ್ಟಿಕ ತೋಟ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದರು. ತಾಪಂ ಸದಸ್ಯರು, ಗ್ರಾಪಂ ಹಾಲಿ ಮತ್ತು ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸಿಬ್ಬಂದಿ ವರ್ಗ, ಗಣ್ಯರು, ರಾಜಕೀಯ ಮುಖಂಡರು, ರೈತರು, ಗ್ರಾಮಸ್ಥರು ಇದ್ದರು.
Check Also
‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’
Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …