ಬೆಟಗೇರಿ: ಮನುಷ್ಯನು ತಮಗೆ ಸಾಧ್ಯವಾದಷ್ಟು ಧಾರ್ಮಿಕ ಕಾರ್ಯಕ್ರಮಗಳಿಗೆ ಸಹಾಯ, ಸಹಕಾರ ನೀಡುವ ಮನೋಭಾವ ಬೆಳಸಿಕೊಳ್ಳಬೇಕು ಎಂದು ಶರಣೆ ಕಸ್ತೂರೆವ್ವ ಸಂಗಯ್ಯ ಹಿರೇಮಠ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಸ.1ರಂದು ನಡೆದ ಭಜನಾ ಮಂಗಲೋತ್ಸವ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿ, ಹಬ್ಬ-ಹರಿದಿನಗಳು, ಜಾತ್ರಾಮಹೋತ್ಸವ, ನಾಡಿನ ಸಂಸ್ಕøತಿ, ಸಂಪ್ರದಾಯದ ಪ್ರತೀಕವಾಗಿವೆ. ಸ್ಥಳೀಯರು ಧಾರ್ಮಿಕ ಕಾರ್ಯಕ್ರಮಗಳಿಗೆ ನೀಡುತ್ತಿರುವ ಸಹಾಯ, ಸಹಕಾರವನ್ನು ಈ ವೇಳೆ ಶ್ಲಾಘಿಸಿದರು.
ಸಂಗಯ್ಯ ಹಿರೇಮಠ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ಮಹಾಂತೇಶ ಸಿದ್ನಾಳ ಅಧ್ಯಕ್ಷತೆ ವಹಿಸಿದ್ದರು.
ಬೆಟಗೇರಿ ಗ್ರಾಮದ ಶ್ರೀವೀರಭದ್ರೇಶ್ವರ ಮಹಿಳಾ ಭಜನಾ ಮಂಡಳಿ ವತಿಯಿಂದ ಶ್ರಾವಣ ಮಾಸದ ನಿಮಿತ್ಯವಾಗಿ ಸ್ಥಳೀಯ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ಇಲ್ಲಿಯ ಮಹಿಳೆಯರಿಂದ ಸತತ 11 ದಿನಗಳ ಕಾಲ ಪ್ರತಿ ದಿನ ಸಂಜೆ 7 ಗಂಟೆಯಿಂದ 9 ಗಂಟೆ ತನಕ ಭಜನಾ ಕಾರ್ಯಕ್ರಮ ನಡೆದು, ಸ.1ರಂದು ಸಂಜೆ 7 ಗಟೆಗೆ ಸ್ಥಳೀಯ ವೀರಭದ್ರೇಶ್ವರ ದೇವರ ಗದ್ದುಗೆಗೆ ಪೂಜೆ, ಅಭಿಷೇಕ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದ ಬಳಿಕ ಭಜನಾ ಮಂಗಲೋತ್ಸವ, ಅನ್ನಪ್ರಸಾದ ಕಾರ್ಯಕ್ರಮ ಸಡಗರದಿಂದ ನಡೆಯಿತು.
ಇಲ್ಲಿಯ ವೀರಭದ್ರೇಶ್ವರ ದೇವರ ವಿವಿಧ ಕಾರ್ಯಕ್ರಮಗಳ ಆಯೋಜಕ ಸಮಿತಿ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಗಣ್ಯರು, ಸಂತ ಶರಣರು, ಪುರವಂತರು, ಮಹಿಳೆಯರು, ಭಕ್ತರು, ಗ್ರಾಮಸ್ಥರು ಭಜನಾ ಮಂಗಲೋತ್ಸÀ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
