Breaking News
Home / ಬೆಳಗಾವಿ / ಬೆಟಗೇರಿ ಪ್ರೌಢ ಶಾಲೆ ಬಾಲಕರು-ಬಾಲಕಿಯರು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಬೆಟಗೇರಿ ಪ್ರೌಢ ಶಾಲೆ ಬಾಲಕರು-ಬಾಲಕಿಯರು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Spread the love

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ವಿವೇಕ ಸುರೇಶ ಕರಿಗಾರ ಮತ್ತು ಶಾಲೆಯ ಬಾಲಕರ ಮತ್ತು ಬಾಲಕಿಯರ ತಂಡ ವಿವಿಧ ಸ್ಪಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದ್ದಾರೆ.

ಗೋಕಾಕದ ವಾಲ್ಮಿಕಿ ಕ್ರೀಡಾಂಗಣದಲ್ಲಿ ಅ.28 ಮತ್ತು ಅ.29 ರಂದು ನಡೆದ ಚಿಕ್ಕೋಡಿ ಜಿಲ್ಲಾ ಮಟ್ಟದ ಪ್ರೌಢ ಶಾಲೆಯ ಕ್ರೀಡಾಕೂಟದ 5000 ಮೀಟರ್ ನಡಿಗೆ ಸ್ಪರ್ಧೆಯಲ್ಲಿ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ವಿವೇಕ ಕರಿಗಾರ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದ್ದಾನೆ. ಅಲ್ಲದೇ ಪ್ರೌಢ ಶಾಲೆಯ ಬಾಲಕರು ಹಾಗೂ ಬಾಲಕಿಯರ ತಂಡ 4*100ಮೀಟರ್ ರಿಲೇ ಸ್ಪರ್ಧೆಯಲ್ಲಿಯೂ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿದ್ದಾರೆ.

ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಫರ್ಧೆಯಲ್ಲಿ ಗಣನೀಯ ಸಾಧನೆಗೈದ ಪ್ರಯುಕ್ತ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಮತ್ತು ಶಿಕ್ಷಕರು, ಎಸ್‍ಡಿಎಮ್‍ಸಿ ಅಧ್ಯಕ್ಷ ರಾಮಣ್ಣ ನೀಲಣ್ಣವರ, ಸದಸ್ಯರು, ಶಿಕ್ಷಣ ಪ್ರೇಮಿಗಳು, ಕ್ರೀಡಾಭಿಮಾನಿಗಳು, ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡ ಶಾಲೆಯ ವಿದ್ಯಾರ್ಥಿ ವಿವೇಕ ಕರಿಗಾರ ಹಾಗೂ ಬಾಲಕರು ಮತ್ತು ಬಾಲಕಿಯರ ತಂಡದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಅಭಿನಂದಿಸಿದ್ದಾರೆ.

 


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ