Breaking News
Home / Recent Posts / ಸರ್ಕಾರಿ ಪ್ರೌಢ ಶಾಲೆಯ ಆವರಣದ ರಕ್ಷಣಾ ಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ

ಸರ್ಕಾರಿ ಪ್ರೌಢ ಶಾಲೆಯ ಆವರಣದ ರಕ್ಷಣಾ ಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ

Spread the love

ಬೆಟಗೇರಿ:ಗ್ರಾಮ ಪಂಚಾಯತಿ ಸಹಯೋಗದಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಸುಮಾರು 7 ಲಕ್ಷ ರೂ.ಗಳ ಅನುದಾನದಡಿಯಲ್ಲಿ ಸ್ಥಳೀಯ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಆವರಣದ ದಕ್ಷಿಣ ಭಾಗದ ರಕ್ಷಣಾ ಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡುವ ಭೂಮಿ ಪೂಜೆ ಕಾರ್ಯಕ್ರಮ ಶುಕ್ರವಾರ ಆ.20 ರಂದು ನಡೆಯಿತು.
ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಅವರು, ಶಾಲೆಯ ಸಮಗ್ರ ಅಭಿವೃದ್ಧಿಗೆ ಸಹಾಯ, ಸಹಕಾರ ನೀಡುತ್ತಿರುವ ಸ್ಥಳೀಯರ ಶೈಕ್ಷಣಿಕ ಶ್ಲಾಘನೀಯ ಸೇವಾ ಕಾರ್ಯದ ಕುರಿತು ಹೇಳಿದರು.
ಗ್ರಾಪಂ ಕಾರ್ಯದರ್ಶಿ ಗೌಡಪ್ಪ ಮಾಳೇದ, ಸುರೇಶ ಬಾಣಸಿ, ವಿಠಲ ಚಂದರಗಿ, ಈಶ್ವರ ಮುಧೋಳ, ಅಶೋಕ ಕೋಣಿ, ಈರಣ್ಣ ಬಳಿಗಾರ, ರಾಮಣ್ಣ ನೀಲಣ್ಣವರ, ಗುತ್ತಿಗೆದಾರ ಬಸವರಾಜ ಕೋಣಿ, ಬಸವರಾಜ ದೇಯಣ್ಣವರ, ಅಪ್ಪಣ್ಣ ಆಶೆಪ್ಪಗೋಳ, ಯಲ್ಲಪ್ಪ ಸವತಿಕಾಯಿ, ಗ್ರಾಪಂ ಸದಸ್ಯರು, ಸಿಬ್ಬಂದಿ ವರ್ಗ, ಗ್ರಾಮಸ್ಥರು ಇದ್ದರು.


Spread the love

About inmudalgi

Check Also

ಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ

Spread the loveಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೇಟ್ರಿಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ