ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನ.9 ರಂದು ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬೆಟಗೇರಿ ಕೃಷ್ಣಶರ್ಮರ ದಿವ್ಯ ಸ್ಮರಣೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆ ಸಮಾರಂಭ ಜರುಗಲಿದೆ.
ಸ್ಥಳೀಯ ಕರವೇದವರ ನೇತೃತ್ವದಲ್ಲಿ ಅಂದು ಮುಂಜಾನೆ 8:30ಗಂಟೆಗೆ ಗ್ರಾಮದ ವಿವಿಧ ವೃತ್ತದಲ್ಲಿರುವ ಪುತ್ಥಳಿಗಳಿಗೆ ಪೂಜೆ, ಪುಷ್ಪಾರ್ಪಣೆ ಸಮರ್ಪಣೆ ಬಳಿಕ ಇಲ್ಲಿಯ ಅಶ್ವಾರೂಢ ಬಸವೇಶ್ವರ ವೃತ್ತದಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಶಾಲಾ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ವಿವಿಧ ರೂಪಕಗಳ, ಜಾನಪದ ಕಲಾ ತಂಡಗಳು ಸೇರಿದಂತೆ ಸಕಲ ವಾದ್ಯಮೇಳಗಳೊಂದಿಗೆ
ಭುವನೇಶ್ವರಿ ದೇವಿಯ ಮತ್ತು ಡಾ.ಬೆಟಗೇರಿ ಕೃಷ್ಣಶರ್ಮರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಲಿದೆ.
ಸಂಜೆ 7 ಗಂಟೆಗೆ ಸ್ಥಳೀಯ ಗಜಾನನ ವೇದಿಕೆ ಮೇಲೆ ಡಾ.ಬೆಟಗೇರಿ ಕೃಷ್ಣಶರ್ಮರ ದಿವ್ಯ ಸ್ಮರಣೋತ್ಸವ ಕಾರ್ಯಕ್ರಮ ಜರುಗಲಿದೆ.
ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ,
ಶಾಸಕ ಬಾಲಚಂದ್ರ ಜಾರಕಿಹೊಳಿ ಉದ್ಘಾಟನೆ ನೆರವೇರಿಸಲಿದ್ದಾರೆ. ಬೆಟಗೇರಿ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಅಧ್ಯಕ್ಷತೆ ವಹಿಸಲಿದ್ದು, ರಂಗಭೂಮಿ ಹಿರಿಯ ಕಲಾವಿದ ಈಶ್ವರಚಂದ್ರ ಬೆಟಗೇರಿ, ಗೋಕಾಕ ಬಿಇಒ ಜಿ.ಬಿ.ಬಳಿಗಾರ, ಗೋಕಾಕ ಕಸಾಪ ಅಧ್ಯಕ್ಷೆ ಭಾರತಿ ಮದಭಾಂವಿ ಗೌರವಾನ್ವಿತ ಅತಿಥಿಗಳಾಗಿ, ಸ್ಥಳೀಯ ಗ್ರಾಪಂ ಅಧ್ಯಕ್ಷೆ ಯಲ್ಲವ್ವ ಚಂದರಗಿ, ಹಾ ಉ ಸಂಘದ ಅಧ್ಯಕ್ಷ ಯಲ್ಲಾಲಿಂಗ ದೇಯಣ್ಣವರ, ಪಿಕೆಪಿಎಸ್ ಅಧ್ಯಕ್ಷ ಮಲ್ಲಿಕಾರ್ಜುನ ಸೋಮಗೌಡ್ರ ಮುಖ್ಯಅತಿಥಿಗಳಾಗಿ, ಗೋಕಾಕ ಸಪಪೂ ಮಹಾವಿದ್ಯಾಲಯದ ಸಹಶಿಕ್ಷಕ ರಾಮಪ್ಪ ಮಿರ್ಜಿ ಉಪನ್ಯಾಸ ನೀಡಲಿದ್ದಾರೆ.
ಜಿ ಕನ್ನಡ ವಾಹಿನಿಯ ಸರಿಗಮಪ ವಿನ್ನರ ಓಂಕಾರ ಪತ್ತಾರ ಅವರಿಂದ ಸಂಜೆ 8:30 ಗಂಟೆಗೆ ಸಂಗೀತ ಮತ್ತು ರೋಣ ತಾಲೂಕಿನ ಕೊತಬಾಳದ ಅರುಣೋದಯ ಸಾಂಸ್ಕøತಿಕ ಕಲಾ ತಂಡದವರಿಂದ ಜಾನಪದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಸ್ಥಳೀಯ ಕನ್ನಡ ಪರ ಹೋರಾಟಗಾರರು, ಸಾಹಿತಿ-ಶರಣರು, ಗಣ್ಯರು, ಗ್ರಾಪಂ ಹಾಗೂ ವಿವಿಧ ಸಂಘ, ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು, ಯುವಕರು, ಕರವೇ ಪದಾಧಿಕಾರಿಗಳು, ಸದಸ್ಯರು, ಕನ್ನಡ ರಾಜ್ಯೋತ್ಸವ ಭವ್ಯ ಮೆರವಣಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸ್ಥಳೀಯ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಪತ್ರಿಕಾ ಪ್ರಕಟನೆಗೆ ತಿಳಿಸಿದ್ದಾರೆ.