Breaking News
Home / ಬೆಳಗಾವಿ / ಡಾ.ಬೆಟಗೇರಿ ಕೃಷ್ಣಶರ್ಮರು ಅಪ್ಪಟ ದೇಶಿ ಕವಿಯಾಗಿದ್ದರು:ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ

ಡಾ.ಬೆಟಗೇರಿ ಕೃಷ್ಣಶರ್ಮರು ಅಪ್ಪಟ ದೇಶಿ ಕವಿಯಾಗಿದ್ದರು:ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ

Spread the love

ಬೆಟಗೇರಿ:ಆನಂದಕಂದ ಕಾವ್ಯನಾಮದಿಂದ ಚಿರಪರಿತರಾಗಿರುವ ಡಾ.ಬೆಟಗೇರಿ ಕೃಷ್ಣಶರ್ಮರು ನಾಡಿನ ಶ್ರೇಷ್ಠ ಸಾಹಿತಿಯಾಗಿದ್ದರು. ಇಂದು ಪ್ರತಿಯೊಬ್ಬರೂ ಸಾಹಿತ್ಯಾಭಿರುಚಿ ಮತ್ತು ಕನ್ನಡಾಭಿಮಾನ ಬೆಳಸಿಕೊಳ್ಳಬೇಕು. ಡಾ.ಬೆಟಗೇರಿ ಕೃಷ್ಣಶರ್ಮರು ಅಪ್ಪಟ ದೇಶಿ ಕವಿಯಾಗಿದ್ದರು ಎಂದು ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ ಹೇಳಿದರು.

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಶ್ರೀ ಗಜಾನನ ವೇದಿಕೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನ.9ರಂದು ನಡೆದ ಡಾ.ಬೆಟಗೇರಿ ಕೃಷ್ಣಶರ್ಮರ ದಿವ್ಯ ಸ್ಮರಣೋತ್ಸವ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ಬೆಟಗೇರಿ ಗ್ರಾಮದ ಯುವಕರು, ಕರವೇ ಸದಸ್ಯರಲ್ಲಿ ಕ್ರೀಯಾಶೀಲ ವ್ಯಕ್ತಿತ್ವ ಮತ್ತು ಒಗ್ಗಟ್ಟುತನದಿಂದ ಕೃಷ್ಣಶರ್ಮರ ದಿವ್ಯಸ್ಮರಣೋತ್ಸವ ಕಾರ್ಯಕ್ರಮ ಮಾಡುತ್ತಿರುವದು ಶ್ಲಾಘನೀಯವಾಗಿದೆ. ಸ್ಥಳೀಯರು ವಿವಿಧ ಕಾರ್ಯಕ್ರಮಗಳಿಗೆ ನೀಡುತ್ತಿರುವ ಸಹಾಯ, ಸಹಕಾರ ಮೆಚ್ಚುವಂತದ್ದಾಗಿದೆ ಎಂದರು.
ಸ್ಥಳೀಯ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗೋಕಾಕ ಸಪಪೂ ಮಹಾವಿದ್ಯಾಲಯದ ಸಹಶಿಕ್ಷಕ ರಾಮಪ್ಪ ಮಿರ್ಜಿ ಅವರು ಡಾ.ಬೆಟಗೇರಿ ಕೃಷ್ಣಶರ್ಮರ ಕುರಿತು ಉಪನ್ಯಾಸ ನೀಡಿದರು. ಗೋಕಾಕ ಕಸಾಪ ಅಧ್ಯಕ್ಷೆ ಭಾರತಿ ಮದಭಾಂವಿ ಜ್ಯೋತಿ ಬೆಳಗಿಸಿ ಉದ್ಘಾಟನೆ ನೆರವೇರಿಸಿದರು. ಶ್ರೀಗಳನ್ನು, ಗಣ್ಯರು ಹಾಗೂ ವಿವಿಧ ವಲಯದಲ್ಲಿ ಸಾಧನೆಗೈದವರನ್ನು ಇಲ್ಲಿಯ ಕರವೇ ವತಿಯಿಂದ ಸತ್ಕರಿಸಿದ ಬಳಿಕ ಜಿ ಕನ್ನಡ ವಾಹಿನಿಯ ಸರಿಗಮಪ ವಿನ್ನರ ಓಂಕಾರ ಪತ್ತಾರ ಅವರಿಂದ ಸಂಗೀತ ಮತ್ತು ರೋಣ ತಾಲೂಕಿನ ಕೊತಬಾಳದ ಅರುಣೋದಯ ಸಾಂಸ್ಕøತಿಕ ಕಲಾ ತಂಡದವರಿಂದ ಜಾನಪದ ಸಂಗೀತ ಕಾರ್ಯಕ್ರಮ ಜರುಗಿತು.

ರಂಗಭೂಮಿ ಹಿರಿಯ ಕಲಾವಿದ ಈಶ್ವರಚಂದ್ರ ಬೆಟಗೇರಿ, ಸ್ಥಳೀಯ ಗ್ರಾಪಂ ಅಧ್ಯಕ್ಷೆ ಯಲ್ಲವ್ವ ಚಂದರಗಿ, ಯಲ್ಲಾಲಿಂಗ ದೇಯಣ್ಣವರ, ಮಲ್ಲಿಕಾರ್ಜುನ ಸೋಮಗೌಡ್ರ, ಬಸವರಾಜ ಪಣದಿ, ರಾಮಣ್ಣ ಮುಧೋಳ, ಮಂಜು ಪತ್ತಾರ, ಭರಮಣ್ಣ ಪೂಜೇರ, ವಿಜಯ ಹಿರೇಮಠ, ಮಾಯಪ್ಪ ಕೋಣಿ, ವೀರಭದ್ರ ದೇಯಣ್ಣವರ, ರಾಘು ಬೆಟಗೇರಿ, ಮಹಾದೇವ ತಪಸಿ, ಫಿರೋಜ್ ಮಿರ್ಜಾನಾಯ್ಕ, ಈರಣ್ಣ ದಂಡಿನ, ಗಿರೀಶ ಗಾಣಗಿ, ಶಿವು ನಾಯ್ಕರ, ಕಾರ್ತಿಕ ತೆರದಾಳ, ಪ್ರದೀಪ ಪತ್ತಾರ, ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಕನ್ನಡಪರ ಹೋರಾಟಗಾರರು, ಸಾಹಿತಿ-ಶರಣರು, ವಿವಿಧ ಸಂಘ, ಸಂಸ್ಥೆಗಳ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಗಣ್ಯರು, ಸ್ಥಳೀಯ ಕರವೇ ಪದಾಧಿಕಾರಿಗಳು, ಸದಸ್ಯರು, ಕನ್ನಡಾಭಿಮಾನಿಗಳು, ಗ್ರಾಮಸ್ಥರು ಇದ್ದರು.


Spread the love

About inmudalgi

Check Also

ತಾಯಿಯ ಎದೆ ಹಾಲಿನ ಮಹತ್ವ” ಬಗ್ಗೆ ಜಾಗೃತಿ ಕಾರ್ಯಕ್ರಮ

Spread the love ಮೂಡಲಗಿ : ಮೊದಲ ಹೆರಿಗೆಯ ಬಳಿಕ ತಾಯಂದಿರಿಗೆ ಹಾಲುಣಿಸುವ ಪ್ರಕ್ರಿಯೆ ಬಗ್ಗೆ ತಿಳಿದಿರುವುದಿಲ್ಲ. ಮಕ್ಕಳಿಗೆ ಎದೆಹಾಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ