ಡಿ.20ರಂದು ಬೆಟಗೇರಿ ದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮದೇವತೆ ಶ್ರೀದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರತಿವರ್ಷದಂತೆ ಈ ವರ್ಷವೂ ಮಂಗಳವಾರ ಡಿ.20 ರಂದು ನಡೆಯಲಿದೆ.
ಡಿ.20 ರಂದು ಬೆಳಿಗ್ಗೆ 7 ಗಂಟೆಗೆ ಸ್ಥಳೀಯ ದ್ಯಾಮವ್ವದೇವಿ ದೇವರ ದೇವಸ್ಥಾನದಲ್ಲಿರುವ ಶ್ರೀದೇವಿಯ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಶ್ರೀದೇವಿ ಶೃಂಗಾರಗೊಳಿಸುವ, ಉಡಿತುಂಬುವದು, ಪುರದೇವರ ವಿವಿಧ ಪಲ್ಲಕ್ಕಿಗಳ ಬರಮಾಡಿಕೊಳ್ಳುವದು, ಸಂಜೆ 6 ಗಂಟೆಗೆ ಪಲ್ಲಕ್ಕಿ ಉತ್ಸವ, ಪುರಜನರಿಂದ ಪೂಜೆ ಪುನಸ್ಕಾರ, ನೈವೇದ್ಯ ಸಮರ್ಪನೆ ನಡೆದ ಬಳಿಕ ಮಹಾಪ್ರಸಾದ, ದೀಪೋತ್ಸವ, ಕಾರ್ತಿಕೋತ್ಸವ ಜರುಗಲಿದೆ.
ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಗಣ್ಯರು, ಗ್ರಾಮ ಪಂಚಾಯತಿ, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಸದಸ್ಯರು, ಸಂತ ಶರಣರು ಮುಖ್ಯಅತಿಥಿಗಳಾಗಿ ಆಗಮಿಸಲಿದ್ದಾರೆಂದು ಇಲ್ಲಿಯ ಗ್ರಾಮದೇವತೆ ದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಆಚರಣಾ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.