ಬೆಟಗೇರಿ:ಗ್ರಾಮದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ 27ನೇ ವರ್ಷದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ, ಅನ್ನಸಂತರ್ಪನೆ, ಉತ್ತರಾಖಂಡ ಶ್ರೀಮದ ಹಿಮವತ್ ಕೇದಾರ ವೈರಾಗ್ಯ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ರಾವಲ್ ಪದವಿ ವಿಭೂಷಿತ ಭೀಮಾಶಂಕರಲಿಂಗ ಶಿವಾಚಾರ್ಯ ಭಗತ್ಪಾದರು ಅಡ್ಡಪಲ್ಲಕ್ಕಿ ಉತ್ಸವ, ದಾನಿಗಳಿಗೆ ಸತ್ಕಾರ ಸಮಾರಂಭ ಹಾಗೂ ಧರ್ಮಸಭೆ ಡಿ.27ರಂದು ಸ್ಥಳೀಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸನ್ನಿದಾನದಲ್ಲಿ ನಡೆಯಲಿದೆ.
ಅಂದು ಮುಂಜಾನೆ 10 ಗಂಟೆಗೆ ಸುತ್ತಲಿನ ಹಲವು ನಗರ ಪಟ್ಟಣ, ಹಳ್ಳಿಗಳಿಂದ ಆಗಮಿಸಿದ ಅಯ್ಯಪ್ಪ ಸ್ವಾಮಿ ಮಾಲಾಧಾರಿ, ಸಂತ, ಶರಣ, ಗಣ್ಯರನ್ನು ಬರಮಾಡಿಕೊಳ್ಳುವದು, ಸಂಜೆ 4 ಗಂಟೆಗೆ ಆನೆಯ ಮೇಲೆ ಅಯ್ಯಪ್ಪಸ್ವಾಮಿ ಮೂರ್ತಿಯೊಂದಿಗೆ ಭವ್ಯ ಮೆರವಣಿಗೆ, ಶ್ರೀಮದ ಹಿಮವತ್ ಕೇದಾರ್ ಪೀಠದ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ಇಲ್ಲಿಯ ಬಸವೇಶ್ವರ ವೃತ್ತದಿಂದ ಅಯ್ಯಪ್ಪಸ್ವಾಮಿ ಸನ್ನಿದಾನದ ತನಕ ಸುಮಂಗಲೆಯರಿಂದ ಆರತಿ, ಕುಂಭ, ಸಕಲ ವಾದ್ಯ ಮೇಳಗಳೊಂದಿಗೆ ಜರುಗಲಿದೆ.
ಸಂಜೆ 6 ಗಂಟೆಗೆ ಅಗ್ನಿಪೂಜೆ, ಮಾಲಾದಾರಿಗಳಿಂದ ಬೆಂಕಿ ಪಾದ ನಡೆಯುವುದು, ಸಂಜೆ 6:30ಗಂಟೆಗೆ ಅಯ್ಯಪ್ಪ ಸ್ವಾಮಿ ಮಹಾಪೂಜೆ, ಮಹಾಭಿಷೇಕ ನಡೆದು, 7 ಗಂಟೆಗೆ ಧರ್ಮಸಭೆ, ದಾನಿಗಳಿಗೆ ಸತ್ಕಾರ ಸಮಾರಂಭ ಹಾಗೂ ರಾತ್ರಿ 8 ಗಂಟೆಗೆ ಮಹಾಪ್ರಸಾದ ನಡೆಯಲಿದೆ.
ಉತ್ತರಾಖಂಡ ಶ್ರೀಮದ ಹಿಮವತ್ ಕೇದಾರ ವೈರಾಗ್ಯ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ರಾವಲ್ ಪದವಿ ವಿಭೂಷಿತ ಭೀಮಾಶಂಕರಲಿಂಗ ಶಿವಾಚಾರ್ಯ ಭಗತ್ಪಾದರು ದಿವ್ಯ ಸಾನಿಧ್ಯ, ಮಮದಾಪೂರದ ಮೌನ ಮಲ್ಲಿಕಾರ್ಜುನ ಸ್ವಾಮಿಜಿ, ಭಾಗೋಜಿಕೊಪ್ಪದ ಡಾ.ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮಿಜಿ, ಮುತ್ನಾಳ ಮತ್ತು ಬೆಡಸೂರ ಕೇದಾರಪೀಠ ಶಾಖಾಮಠದ ಶಿವಾನಂದ ಶಿವಾಚಾರ್ಯ ಮಹಾಸ್ವಾಮೀಜಿ, ಸುಣಧೋಳಿಯ ಅಭಿನವ ಶಿವಾನಂದ ಸ್ವಾಮಿಜಿ, ಕಡಕೋಳದ ಸಿದ್ದರಾಯ ಅಜ್ಜನವರು, ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ, ಹನುಮಂತ ವಡೇರ, ಮುತ್ತೆಪ್ಪ ವಡೇರ ನೇತೃತ್ವ ವಹಿಸಲಿದ್ದಾರೆ.
ಶಾಸಕ ಬಾಲಚಂದ್ರ ಜಾರಕಿಹೊಳಿ ಸಮಾರಂಭ ಉದ್ಘಾಟನೆ ನೆರವೇರಿಸಲಿದ್ದಾರೆ. ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಅಧ್ಯಕ್ಷತೆ, ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ರಾಜೇಂದ್ರ ಸಣ್ಣಕ್ಕಿ ಜ್ಯೊತಿ ಪ್ರಜ್ವಲಿಸಲಿದ್ದಾರೆ. ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಜಿಪಂ, ತಾಪಂ, ಗ್ರಾಪಂ ಮಾಜಿ ಮತ್ತು ಹಾಲಿ ಅಧ್ಯಕ್ಷರು, ಸದಸ್ಯರು, ವಿವಿಧ ಸಂಘಗಳ ಅಧ್ಯಕ್ಷರು, ಸದಸ್ಯರು, ಗಣ್ಯರು, ಸಂತ ಶರಣರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಸ್ಥಳೀಯ ಹಾಗೂ ಸುತ್ತಲಿನ ಹಲವು ನಗರ, ಪಟ್ಟಣ, ಹಳ್ಳಿಗಳ ನೂರಾರು ಜನ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಗುರುಸ್ವಾಮಿಗಳ ಸಮ್ಮುಖದಲ್ಲಿ ವಿವಿಧ ಕಾರ್ಯಕ್ರಮಗಳು ನಡೆದ ಬಳಿಕ ಪ್ರಸಕ್ತ ವರ್ಷದ ಕಾರ್ಯಕ್ರಮ ಸಮಾರೂಪಗೊಳ್ಳಲಿದೆ ಎಂದು ಇಲ್ಲಿಯ ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.