Breaking News
Home / ಬೆಳಗಾವಿ / ಪ್ರತಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಅವಶ್ಯಕವಾಗಿದೆ : ಎಚ್.ಎನ್.ಬಾವಿಕಟ್ಟಿ

ಪ್ರತಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಅವಶ್ಯಕವಾಗಿದೆ : ಎಚ್.ಎನ್.ಬಾವಿಕಟ್ಟಿ

Spread the love

ಪ್ರತಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಅವಶ್ಯಕವಾಗಿದೆ : ಎಚ್.ಎನ್.ಬಾವಿಕಟ್ಟಿ

ಬೆಟಗೇರಿ:ಇಂದಿನ ಯುಗದಲ್ಲಿ ಗಣಕಯಂತ್ರಗಳ ಪಾತ್ರ ಬಹಳ ಮುಖ್ಯವಾಗಿದೆ. ಪ್ರತಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಅವಶ್ಯಕವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಪಿಡಿಒ ಎಚ್.ಎನ್.ಬಾವಿಕಟ್ಟಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ವತಿಯಿಂದ ಸ್ಥಳೀಯ ಗ್ರಾಪಂ ಕಾರ್ಯಾಲಯದ ಸಭಾಭುವನದಲ್ಲಿ ಇತ್ತೀಚೆಗೆ ನಡೆದ ಗಣಕಯಂತ್ರ ಪಿತಾಮಹ ಚಾಲ್ಸ್ ಬ್ಯಾಬೇಜ್ ಅವರ ಹುಟ್ಟುಹಬ್ಬದ ಪ್ರಯುಕ್ತ ಕಂಪ್ಯೂಟರ್ ಅಪರೇಟರ್ ದಿನಾಚರಣೆ ನಿಮಿತ್ಯ ಸ್ಥಳೀಯ ಗ್ರಾಪಂ ಕಂಪ್ಯೂಟರ್ ಅಪರೇಟರ್ ವಿಠಲ  ಚಂದರಗಿ ಅವರನ್ನು ಸನ್ಮಾನಿಸಿ ಮಾತನಾಡಿದರು.
ಸ್ಥಳೀಯ ಗ್ರಾಮಸ್ಥರಲ್ಲಿ ಮನವಿ: ಗೋಕಾಕ ತಾಪಂ ಇಒ ಪರುಶುರಾಮ ಘಸ್ತೆ ಹಾಗೂ ಮೇಲಾಧಿಕಾರಿಗಳ ನಿರ್ದೇಶನದಂತೆ ಬೆಟಗೇರಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮದ ಮನೆ, ಅಂಗಡಿ, ಮುಂಗಟ್ಟುಗಳಿಗೆ ಗ್ರಾಪಂ ಸಿಬ್ಬಂದಿ ತೆರಳಿ ಕರ ಪಾವತಿಸಿಕೊಳ್ಳುವ ಕಾರ್ಯಕೈಗೊಂಡಿದ್ದಾರೆ. ಗ್ರಾಮದ ಗ್ರಾಮಸ್ಥರು ತಮ್ಮ ಮನೆ, ಅಂಗಡಿ, ಮುಂಗ್ಗಟ್ಟುಗಳ ಹಾಗೂ ಮತ್ತೀತರ ಕರಗಳನ್ನು ಸ್ಥಳೀಯ ಗ್ರಾಮ ಪಂಚಾಯ್ತಿ ಸಿಬ್ಬಂದಿ ಅವರಲ್ಲಿ ಕೊಡಲೇ ಪಾವತಿಸಿಕೊಳ್ಳಬೇಕು. ಸ್ಥಳೀಯರು ವಿವಿಧ ಕರ ಪಾವತಿಸಿ, ಗ್ರಾಪಂ ಸಹಯೋಗದಲ್ಲಿ ಗ್ರಾಮದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಇಲ್ಲಿಯ ಗ್ರಾಪಂ ಪಿಡಿಒ ಎಚ್.ಎನ್.ಬಾವಿಕಟ್ಟಿ ಅವರು ಈ ವೇಳೆ ಸ್ಥಳೀಯರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಇಲ್ಲಿಯ ಗ್ರಾಪಂ ಕಾರ್ಯದರ್ಶಿ ಎಮ್.ಪಿ.ತಳವಾರ, ಕರ ವಸೂಲಿಗಾರ ಸುರೇಶ ಬಾಣಸಿ, ಬಸವರಾಜ ಪಣದಿ, ವಿಠಲ ಚಂದರಗಿ, ಶಿವಾನಂದ ಐದುಡ್ಡಿ ಸೇರಿದಂತೆ ಗ್ರಾಪಂ ಸಿಬ್ಬಂದಿ, ಗ್ರಾಮಸ್ಥರು ಇದ್ದರು.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ