ಬೆಟಗೇರಿ:ಮನುಷ್ಯ ಜನ್ಮ ಸಾರ್ಥಕವಾಗಲು ಪ್ರತಿಯೊಬ್ಬರೂ ದೇವರ ನಾಮಸ್ಮರಣೆ ಮಾಡಿ, ಭಗವಂತನ ಕೃಪಾರ್ಶೀವಾದಕ್ಕೆ ಪಾತ್ರರಾಗಬೇಕು. ವೃತಾಚರಣೆ ಮೂಲಕ ಶ್ರೀಅಯ್ಯಪ್ಪಸ್ವಾಮಿ ನಾಮಸ್ಮರಣೆಗೈಯುತ್ತಿರುವ ಶ್ರೀಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ದೇವರು ಒಳ್ಳೆಯದು ಮಾಡಲಿ ಎಂದು ಉತ್ತರಾಖಂಡ ಶ್ರೀಮದ ಹಿಮವತ್ ಕೇದಾರ ವೈರಾಗ್ಯ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ರಾವಲ್ ಪದವಿ ವಿಭೂಷಿತ ಭೀಮಾಶಂಕರಲಿಂಗ ಶಿವಾಚಾರ್ಯ ಭಗತ್ಪಾದರು ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಓಂ ಶ್ರೀಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ ಡಿ.27ರಂದು ನಡೆದ 27 ನೇ ವರ್ಷದ ಅಯ್ಯಪ್ಪ ಸ್ವಾಮಿ ಮಹಾಪೂಜೆ, ಅನ್ನಸಂತರ್ಪನೆ, ಉತ್ತರಾಖಂಡ ಶ್ರೀಮದ ಹಿಮವತ್ ಕೇದಾರ ವೈರಾಗ್ಯ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ರಾವಲ್ ಪದವಿ ವಿಭೂಷಿತ ಭೀಮಾಶಂಕರಲಿಂಗ ಶಿವಾಚಾರ್ಯ ಭಗತ್ಪಾದರು ಅಡ್ಡಪಲ್ಲಕ್ಕಿ ಉತ್ಸವ, ದಾನಿಗಳಿಗೆ ಸತ್ಕಾರ ಸಮಾರಂಭ ಹಾಗೂ ಧರ್ಮಸಭೆಯ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಸ್ಥಳೀಯ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ಭಕ್ತಿ, ಶ್ರೇದ್ಧೆಯಿಂದ ಮಾಡಿದ್ದಿರಿ, ಸತತ 27ವರ್ಷಗಳಿಂದ ಅಯ್ಯಪ್ಪಸ್ವಾಮಿ ಮಹಾಪೂಜಾ ಕಾರ್ಯಕ್ರಮ ಅದ್ಧೂರಿಯಾಗಿ ಆಯೋಜಿಸುತ್ತಿರುವ ಕಾರ್ಯ ಸಂತೋಷ ತಂದಿದೆ ಎಂದು ಉತ್ತರಾಖಂಡ ಶ್ರೀಮದ ಹಿಮವತ್ ಕೇದಾರ ವೈರಾಗ್ಯ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ರಾವಲ್ ಪದವಿ ವಿಭೂಷಿತ ಭೀಮಾಶಂಕರಲಿಂಗ ಶಿವಾಚಾರ್ಯ ಭಗತ್ಪಾದರು ಅಭಿಪ್ರಾಯಿಸಿದರು.
ಮಮದಾಪೂರದ ಮೌನ ಮಲ್ಲಿಕಾರ್ಜುನ ಸ್ವಾಮಿಜಿ, ಸುಣಧೋಳಿಯ ಅಭಿನವ ಶಿವಾನಂದ ಸ್ವಾಮಿಜಿ, ಭಾಗೋಜಿಕೊಪ್ಪದ ಡಾ.ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮಿಜಿ, ಮುತ್ನಾಳ ಮತ್ತು ಬೆಡಸೂರ ಕೇದಾರಪೀಠ ಶಾಖಾಮಠದ ಶಿವಾನಂದ ಶಿವಾಚಾರ್ಯ ಮಹಾಸ್ವಾಮೀಜಿ, ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ, ಹನುಮಂತ ವಡೇರ, ಮುತ್ತೆಪ್ಪ ವಡೇರ ನೇತೃತ್ವ, ಅಯ್ಯಪ್ಪ ಸ್ವಾಮಿ ಮಾಲಾಧಾರಿ ಗುರುಸ್ವಾಮಿಗಳಾದ ವೀರನಾಯ್ಕ ನಾಯ್ಕರ, ಬಸವರಾಜ ಬೆಟಗೇರಿ ಸಮ್ಮುಖ ವಹಿಸಿದ್ದರು. ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಅಧ್ಯಕ್ಷತೆ ವಹಿಸಿದ್ದರು.
![](https://inmudalgi.com/wp-content/uploads/2024/12/28-BTG-1-1-1-300x215.jpg)
ವೈಭವದೊಂದಿಗೆ ನಡೆದ ಅಡ್ಡಪಲ್ಲಕ್ಕಿ ಉತ್ಸವ
ಶುಕ್ರವಾರದಂದು ಮುಂಜಾನೆ 10 ಗಂಟೆಗೆ ಅಯ್ಯಪ್ಪಸ್ವಾಮಿ ಮಹಾಪೂಜೆ ಸಮಾರಂಭಕ್ಕೆ ಆಗಮಿಸಿದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳನ್ನು ಬರಮಾಡಿಕೊಳ್ಳಲಾಯಿತು. ಸಂಜೆ 4 ಗಂಟೆಗೆ ಅಯ್ಯಪ್ಪಸ್ವಾಮಿ ಮೂರ್ತಿಯೊಂದಿಗೆ ಶ್ರೀಮದ್ ಕೇದಾರ್ ಪೀಠದ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ಇಲ್ಲಿಯ ಬಸವೇಶ್ವರ ವೃತ್ತದಿಂದ ಅಯ್ಯಪ್ಪಸ್ವಾಮಿ ಸನ್ನಿದಾನದ ತನಕ ಒಂಟೆ, ಸುಮಂಗಲೆಯರಿಂದ ಆರತಿ, ಕುಂಭ ಮೇಳ, ಕರಡಿ ಮಜಲು, ಜಾಂಜ್‍ಪಥ್‍ಕ ಸೇರಿದಂತೆ ಸಕಲ ವಾದ್ಯ ಮೇಳಗಳೊಂದಿಗೆ ವೈಭವದಿಂದ ನಡೆಯಿತು. ಸಂಜೆ 6 ಗಂಟೆಗೆ ಅಗ್ನಿಪೂಜೆ, ಮಾಲಾದಾರಿಗಳಿಂದ ಬೆಂಕಿಪಾದ ನಡೆಯುವುದು, ಅಯ್ಯಪ್ಪ ಸ್ವಾಮಿ ಮಹಾಪೂಜೆ, ಮಹಾಭಿಷೇಕ ನಡೆದು, ಗಣ್ಯರಿಗೆ, ದಾನಿಗಳಿಗೆ ಸತ್ಕಾರ ಸಮಾರಂಭ, ಮಹಾಪ್ರಸಾದ ಜರುಗಿದ ಬಳಿಕ ಪ್ರಸಕ್ತ ವರ್ಷದ ಕಾರ್ಯಕ್ರಮ ಸಮಾರೂಪಗೊಂಡಿತು.
ಸ್ಥಳೀಯ ಹಾಗೂ ಸುತ್ತಲಿನ ಹತ್ತೂರಿನ ವಿವಿಧ ಸಂಘ-ಸಂಸ್ಥೆಗಳ ಹಾಗೂ ಗ್ರಾಪಂ, ತಾಪಂ ಹಾಲಿ ಮತ್ತು ಮಾಜಿ ಅಧ್ಯಕ್ಷರು, ಸದಸ್ಯರು, ಗಣ್ಯರು, ಸಂತ-ಶರಣರು, ರಾಜಕೀಯ ಮುಖಂಡರು, ಯುವಕ ಸಂಘದ ಪದಾಧಿüಕಾರಿಗಳು, ಸದಸ್ಯರು, ಪುರವಂತರು, ನೂರಾರು ಜನ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಗುರುಸ್ವಾಮಿಗಳು, ಮಾಲಾಧಿಕಾರಿಗಳು, ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಸದಸ್ಯರು, ಭಕ್ತರು, ಗ್ರಾಮಸ್ಥರು ಇದ್ದರು.