Breaking News
Home / ಬೆಳಗಾವಿ / ಬೆಟಗೇರಿಯಲ್ಲಿ ಉಚಿತ ಕಣ್ಣಿನ ಪೂರೆ ತಪಾಸಣೆ ಬೃಹತ್ ಶಿಬಿರ

ಬೆಟಗೇರಿಯಲ್ಲಿ ಉಚಿತ ಕಣ್ಣಿನ ಪೂರೆ ತಪಾಸಣೆ ಬೃಹತ್ ಶಿಬಿರ

Spread the love

ಬೆಟಗೇರಿ:ಗೋಕಾಕ ಲಾಯನ್ಸ್ ಕ್ಲಬ್, ಗೋಕಾಕ ತಾಲೂಕಿನ ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಗ್ರಾಮ ಪಂಚಾಯತಿ, ಗಜಾನನ ಯುವಕ ಮಂಡಳ, ರಕ್ಷಣಾ ವೇದಿಕೆ, ಗೋಕಾಕ ತಾಲೂಕಾ ಆರೋಗ್ಯ ಅಧಿಕಾರಿಗಳು, ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಹಾಗೂ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರವಿವಾರ ಜ.5ರಂದು ಮುಂಜಾನೆ 10 ಗಂಟೆಗೆ ಉಚಿತ ಕಣ್ಣಿನ ಪೂರೆ ತಪಾಸಣಾ ಬೃಹತ್ ಶಿಬಿರದ ಉದ್ಘಾಟನೆ ನಡೆಯಲಿದೆ.

ಸುಣಧೋಳಿ ಜಡಿಸಿದ್ಧೇಶ್ವರ ಮಠದ ಅಭಿನವ ಶಿವಾನಂದ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಸ್ಥಳೀಯ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಯಲ್ಲಾಲಿಂಗ ದೇಯಣ್ಣವರ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಸವಂತ ಕೋಣಿ, ಗ್ರಾಮ ಪಂಚಾಯತಿ ಅಧ್ಯಕ್ಷೆ ಯಲ್ಲವ್ವ ಚಂದರಗಿ, ಗಜಾನನ ಯುವಕ ಮಂಡಳ ಅಧ್ಯಕ್ಷ ಬಸವರಾಜ ದೇಯಣ್ಣವರ, ರಕ್ಷಣಾ ವೇದಿಕೆ ಬೆಟಗೇರಿ ಘಟಕದ ಅಧ್ಯಕ್ಷ ಈರಣ್ಣ ಬಳಿಗಾರ, ಗೋಕಾಕ ತಾಲೂಕಾ ಆರೋಗ್ಯ ಅಧಿಕಾರಿ ಡಾ.ಎಮ್.ಎಸ್.ಕೊಪ್ಪದ, ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸರಸ್ವತಿ ತಂಬಾಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಸಾರ್ವಜನಿಕರಲ್ಲಿ ಮನವಿ : ಬೆಟಗೇರಿ, ತಪಸಿ, ಕೆಮ್ಮನಕೋಲ, ಸಜ್ಯಾಳ, ಚಿಕ್ಕನಂದಿ, ಹಿರೇನಂದಿ, ಪಂಚನಾಯಕನಹಟ್ಟಿ, ಅಕ್ಕಿಸಾಗರ, ಗೋಸಬಾಳ ಹಾಗೂ ಸುತ್ತಲಿನ ಹತ್ತೂರಿನ ಸಾರ್ವಜನಿಕರು ಡಿ.5ರಂದು ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ ಉಚಿತ ಕಣ್ಣಿನ ಪೂರೆ ತಪಾಸಣಾ ಬೃಹತ್ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಗೋಕಾಕ ಲಾಯನ್ಸ್ ಕ್ಲಬ್ ಪಾಧಿಕಾರಿಗಳು, ಸದಸ್ಯರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಗೋಕಾಕ ಲಾಯನ್ಸ್ ಕ್ಲಬ್ ಅಧ್ಯಕ್ಷ ಅಶೋಕ ಲಗಮಪ್ಪಗೋಳ, ಕಾರ್ಯದರ್ಶಿ ಸುರೇಶ ಶಿಂದಿಹಟ್ಟಿ, ಖಚಾಂಚಿ ಪ್ರಶಾಂತ ಅಂಕದವರ, ಸ್ಥಳೀಯ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಗಣ್ಯರು ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ