Breaking News
Home / ಬೆಳಗಾವಿ / ಬೆಟಗೇರಿ ವಿವಿಧೆಡೆ ಸಂಭ್ರಮದಿಂದ ನಡೆದ 76 ನೇ ಗಣರಾಜ್ಯೋತ್ಸವ ದಿನಾಚರಣೆ

ಬೆಟಗೇರಿ ವಿವಿಧೆಡೆ ಸಂಭ್ರಮದಿಂದ ನಡೆದ 76 ನೇ ಗಣರಾಜ್ಯೋತ್ಸವ ದಿನಾಚರಣೆ

Spread the love

ಬೆಟಗೇರಿ ವಿವಿಧೆಡೆ ಸಂಭ್ರಮದಿಂದ ನಡೆದ 76 ನೇ ಗಣರಾಜ್ಯೋತ್ಸವ ದಿನಾಚರಣೆ

ಬೆಟಗೇರಿ :ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಸವೇಶ್ವರ ಸೌಹಾರ್ದ ಸಹಕಾರಿಯಲ್ಲಿ ಜ.26ರಂದು 76ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಸಹಕಾರಿಯ ಅಧ್ಯಕ್ಷ ಬಸವರಾಜ ಮಾಳೇದ ಧ್ವಜಾರೋಹಣ ನೆರವೇರಿಸಿದರು. ಶಾಲಾ ಮಕ್ಕಳಿಗೆ ಸಿಹಿ ವಿತರಿಸಲಾಯಿತು. ಸಹಕಾರಿಯ ಆಡಳಿತ ಮಂಡಳಿ ಸದಸ್ಯರು, ಮುಖ್ಯ ಕಾರ್ಯನಿರ್ವಾಹಕ ಈರಣ್ಣ ಸಿದ್ನಾಳ, ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ, ದುಂಡಪ್ಪ ಕಂಬಿ, ಶಂಕರ ತೊಂಡಿಕಟ್ಟಿ, ರವಿ ಪೂಜೇರ, ಹಜರತ್ ಮಿರ್ಜಾನಾಯ್ಕ, ಸತ್ತೆಪ್ಪ ಪೂಜೇರ, ಈರಣ್ಣ ಬೆಟಗೇರಿ, ಅರ್ಜುನ ಬ್ಯಾಗಿ, ಸಹಕಾರಿ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ, ಗಣ್ಯರು ಇದ್ದರು.
ಸರ್ಕಾರಿ ಪ್ರೌಢ ಶಾಲೆ:ಗ್ರಾಮದ ವಿವಿಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಜ.26ರಂದು 76ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಧ್ವಜಾರೋಹಣ ಮಾಡಿದರು. ಶಾಲೆಯ ಸ್ಕೌಟ್ ವಿದ್ಯಾರ್ಥಿಗಳಿಂದ ವಿಶೇಷ ಪರೇಡ್, ಧ್ವಜಾರೋಹಣಕ್ಕೆ ಗೌರವ ಸಮರ್ಪನೆ ಕಾರ್ಯಕ್ರಮ ನಡೆಯಿತು. ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆ ಆಯೋಜಿಸಿ, ವಿಜೇತರಿಗೆ ಬಹುಮಾನ ವಿತರಿಸಿದ ಬಳಿಕ ಸಿಹಿ ಹಂಚಲಾಯಿತು, ಶಾಲೆಯ ಎಸ್‍ಡಿಎಮ್‍ಸಿ ಅಧ್ಯಕ್ಷರು, ಸದಸ್ಯರು, ಶಿಕ್ಷಕರು ಇದ್ದರು.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ