Breaking News
Home / ಬೆಳಗಾವಿ / ಜೂ.7ರಿಂದ ಬೆಟಗೇರಿ ಮಾರುತಿ ದೇವರ ಓಕುಳಿ

ಜೂ.7ರಿಂದ ಬೆಟಗೇರಿ ಮಾರುತಿ ದೇವರ ಓಕುಳಿ

Spread the love

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿ ಶನಿವಾರ ಜೂ.7ರಿಂದ ಮಂಗಳವಾರ ಜೂ.10ರವರೆಗೆ ಜರುಗಲಿದೆ.

ಜೂ.7ರಂದು ಮುಂಜಾನೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಕುಂಕುಮ ಮತ್ತು ಮಹಾಪೂಜೆ, ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡ ಪೂಜೆ, ನಂತರ ಕರಡಿ, ಹಲಗೆ ಮಜಲು ಸೇರಿದಂತೆ ಸಕಲ ವಾಧ್ಯಗಳ ವಾದನ, ಪಲ್ಲಕ್ಕಿ ಉತ್ಸವ ನಡೆಯಲಿದೆ.
ಜೂ.8ರಂದು ಮುಂಜಾನೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಅಭಿಷೇಕ, ಪೂಜೆ, ಸಾಯಂಕಾಲ 5 ಗಂಟೆಗೆ ನಡು ಓಕುಳಿ. ಜೂ.9ರಂದು 8 ಗಂಟೆಯಿಂದ ಪುರಜನರಿಂದ ಪೂಜೆ-ಪುನಸ್ಕಾರ, ನೈವೈದ್ಯ, ಹರಕೆ ಸಮರ್ಪಣೆ ನಡೆದು, ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡಕ್ಕೆ ಸ್ಥಳೀಯ ವಿವಿಧ ದೇವರÀ ಪಲ್ಲಕ್ಕಿ ಪ್ರದಕ್ಷೀಣೆ ಬಳಿಕ ಕಡೆ ಓಕಳಿ ನಡೆಯಲಿದ್ದು, ವಿವಿಧ ಪ್ರಾಣಿಗಳ ಸೊಗಿನ ಕುಣಿತದ ಪ್ರದರ್ಶನ, ಅದೇ ದಿನ ರಾತ್ರಿ 10.30ಕ್ಕೆ ತುಳಸಿಗೇರಿ ಜೈ ಹನುಮಾನ ನಾಟ್ಯ ಸಂಘದವರಿಂದ ಶ್ರೀ ಕೃಷ್ಣಪಾರಿಜಾತ ಕಲಾಸಂಘದವರಿಂದ ನಾಟಕ ಪ್ರದರ್ಶನ ಜರುಗಲಿದೆ.
ಮಂಗಳವಾರ ಜೂ.10ರಂದು ಮುಂಜಾನೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಅಭಿಷೇಕ, ಪೂಜೆ, ಸಾಯಂಕಾಲ 4 ಗಂಟೆಗೆ ಜಂಗಿ ಕುಸ್ತಿಗಳು ನಡೆದ ಬಳಿಕ ಸಂಜೆ ಮಾರುತಿ ದೇವರ ದೇವಾಲಯಕ್ಕೆ ಪಲ್ಲಕ್ಕಿ ಪ್ರರ್ದಕ್ಷಣೆ ನಡೆಯಲಿದೆ ಎಂದು ಇಲ್ಲಿಯ ಮಾರುತಿ ದೇವರ ಓಕುಳಿ ಉತ್ಸವ ಆಚರಣಾ ಸಮಿತಿ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ