ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಜು.10ರಂದು ಶಿವಶರಣ ಹಡಪದ ಅಪ್ಪಣ್ಣವರ ಜಯಂತಿ ಆಚರಿಸಲಾಯಿತು.
ಸ್ಥಳೀಯ ಗ್ರಾಪಂ ಪಿಡಿಒ ಎಮ್.ಎಲ್.ಯಂಡ್ರಾವಿ ಶಿವಶರಣ ಅಪ್ಪಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬಳಿಕ ಸಿಹಿ ವಿತರಿಸಲಾಯಿತು. ಸ್ಥಳೀಯ ಗ್ರಾಮ ಪಂಚಾಯ್ತಿ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕ ಬಸವರಾಜ ಪಣದಿ ಶಿವಶರಣ ಅಪ್ಪಣ್ಣ ಅವರ ಕುರಿತು ಮಾತನಾಡಿದರು.
ಗ್ರಾಪಂ ಕಾರ್ಯದರ್ಶಿ ಮಾರುತಿ ತಳವಾರÀ, ಸುರೇಶ ಬಾಣಸಿ, ವಿಠ್ಠಲ ಚಂದರಗಿ, ಶಿವಾನಂದ ಐದುಡ್ಡಿ, ಈರಪ್ಪ ದಂಡಿನ, ಮಾರುತಿ ಬಣಜಿಗೇರ, ತುಕಾರಾಮ ಕುರಿ, ಸಿದ್ರಾಮ ಚಂದರಗಿ ಸೇರಿದಂತೆ ಗ್ರಾಪಂ ಸದಸ್ಯರು, ಸ್ಥಳೀಯ ಹಿರಿಯ ನಾಗರಿಕರು, ಇತರರು ಇದ್ದರು.