ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ನೂಲ ಹುಣ್ಣಿಮೆ ಹಾಗೂ ಶ್ರಾವಣ ಮಾಸದ ಪ್ರಯುಕ್ತ ಆಗಷ್ಟ 8 ಮತ್ತು 9ರಂದು ಇಲ್ಲಿಯ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ ನಡೆಯಲಿದೆ.
ಆ.8ರಂದು ಇಲ್ಲಿಯ ಶ್ರೀ ವೀರಭದ್ರೇಶ್ವರ ದೇವರ ದೇವಾಲಯದ ವೀರಭದ್ರೇಶ್ವರ ದೇವರ ಗದ್ಗುಗೆ ಪೂಜೆ, ನೈವೇದ್ಯ ಸಮರ್ಪನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದೆ. ರಾತ್ರಿ 8 ಗಂಟೆಗೆ ಜೀ ಕನ್ನಡ ಸರಿಗಮಪ ಖ್ಯಾತಿಯ ಶ್ರೀಮತಿ ಸುಜಾತಾ ಕಲ್ಮೇಶ ಹಾಗೂ ತಂಡದವರಿಂದ ಸುಗಮ ಸಂಗೀತ, ವಿವಿಧ ಭಜನಾ ತಂಡದವರಿಂದ ಭಜನೆ, ಜಾಗರಣೆ ಕಾರ್ಯಕ್ರಮ ನಡೆಯಲಿದೆ.
ಆ.9ರಂದು ಬೆಳಗ್ಗೆ 6ಗಂಟೆಗೆ ಸ್ಥಳೀಯ ವೀರಭದ್ರೇಶ್ವರ ದೇವಾಲಯದ ವೀರಭದ್ರೇಶ್ವರ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಮಹಾಪೂಜೆ, ಮುಂಜಾನೆ 8ಗಂಟೆಗೆ ಆರತಿ, ಕರಡಿ ಮಜಲು, ವಾದ್ಯಮೇಳದೊಂದಿಗೆ ಪುರವಂತರಿಂದ ವೀರಭದ್ರೇಶ್ವರ ದೇವರ ಒಡಪು ಹೇಳುವ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ವೀರಭದ್ರೇಶ್ವರ ದೇವರ ಮತ್ತು ಭದ್ರಕಾಳಿ ಮಾತೆಯ ಮೂರ್ತಿಗಳ ಪಲ್ಲಕ್ಕಿ ಉತ್ಸವ, ಪುರಜನರಿಂದ ಪೂಜೆ, ನೈವೇದ್ಯ ಸಮರ್ಪನೆ, ಮಹಾಪ್ರಸಾದ, ಶ್ರೀಗಳಿಗೆ, ದಾನಿಗಳಿಗೆ, ಗಣ್ಯರಿಗೆ ಸತ್ಕಾರ ಸಮಾರಂಭ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.
ಗೋಕಾಕ ಶೂನ್ಯ ಸಂಪಾದನಾ ಮಠದ ಮುರುಘರಾಜೇಂದ್ರ ಸ್ವಾಮೀಜಿ, ಸುಣಧೋಳಿ ಅಭಿನವ ಶಿವಾನಂದ ಸ್ವಾಮಿಜಿ ದಿವ್ಯ ಸಾನಿಧ್ಯ, ಭಾಗೋಜಿಕೊಪ್ಪದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮಿಜಿ, ಸತ್ತಿಗೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಸಮ್ಮುಖ, ಸಂಗಯ್ಯ ಹಿರೇಮಠ, ಈರಯ್ಯ ಹಿರೇಮಠ ಜಾತ್ರಾ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದಾರೆ.
ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹರ, ಗುರು, ಚರಮೂರ್ತಿಗಳು, ಗಣ್ಯರು, ರಾಜಕೀಯ ಮುಖಂಡರು, ಪುರವಂತರು, ವಿವಿಧ ಸಂಘ-ಸಂಸ್ಥೆಗಳ ಹಾಲಿ ಮತ್ತು ಮಾಜಿ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು, ವೀರಭದ್ರೇಶ್ವರ ದೇವರ ಭಕ್ತರು, ಸ್ಥಳೀಯರು ಉಪಸ್ಥಿತರಿರುವರು ಎಂದು ಜಾತ್ರಾ ಮಹೋತ್ಸವ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.