ಬೆಟಗೇರಿ: ಗ್ರಾಮದಲ್ಲಿ ನಡೆಯಲಿರುವ ಸುಗಮ ಸಂಗೀತ ಕಾರ್ಯಕ್ರಮದ ಉದ್ಘಾಟನೆಗೆ ಆಗಮಿಸುತ್ತಿರುವ ಶ್ರೀಗಳು
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ ಪ್ರಯುಕ್ತ ಆಗಷ್ಟ 8 ಮತ್ತು 9ರಂದು ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಸ್ಥಳೀಯ ಶ್ರೀ ವೀರಭದ್ರೇಶ್ವರ ದೇವರ ದೇವಾಲಯ ಆವರಣದಲ್ಲಿ ಆಗಷ್ಟ 8 ರಂದು ರಾತ್ರಿ 8 ಗಂಟೆಗೆ ಜೀ ಕನ್ನಡ ಸರಿಗಮಪ ಖ್ಯಾತಿಯ ಶ್ರೀಮತಿ ಸುಜಾತಾ ಕಲ್ಮೇಶ ಹಾಗೂ ತಂಡದವರಿಂದ ಸುಗಮ ಸಂಗೀತ ಉದ್ಘಾಟನೆ ಕಾರ್ಯಕ್ರಮ ನಡೆದ ಬಳಿಕ ಸುಗಮ ಸಂಗೀತ ಕಾರ್ಯಕ್ರಮ ಜರುಗಿದ ನಂತರ ವಿವಿಧ ಭಜನಾ ತಂಡದವರಿಂದ ಭಜನೆ, ಜಾಗರಣೆ, ಆ.9ರಂದು ಬೆಳಗ್ಗೆ 9ಗಂಟೆಗೆ ಸುಗಮ ಸಂಗೀತ ಕಾರ್ಯಕ್ರಮ ನಡೆದ ಬಳಿಕ ಶ್ರೀಗಳಿಗೆ, ದಾನಿಗಳಿಗೆ, ಗಣ್ಯರಿಗೆ ಸತ್ಕಾರ ಸಮಾರಂಭ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.
ಗೋಕಾಕ ಶೂನ್ಯ ಸಂಪಾದನಾ ಮಠದ ಮುರುಘರಾಜೇಂದ್ರ ಸ್ವಾಮೀಜಿ, ಸುಣಧೋಳಿ ಅಭಿನವ ಶಿವಾನಂದ ಸ್ವಾಮಿಜಿ ದಿವ್ಯ ಸಾನಿಧ್ಯ, ಭಾಗೋಜಿಕೊಪ್ಪದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮಿಜಿ, ಸತ್ತಿಗೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಸಮ್ಮುಖ, ಸಂಗಯ್ಯ ಹಿರೇಮಠ, ಈರಯ್ಯ ಹಿರೇಮಠ ಜಾತ್ರಾ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದಾರೆ.
ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹರ, ಗುರು, ಚರಮೂರ್ತಿಗಳು, ಗಣ್ಯರು, ರಾಜಕೀಯ ಮುಖಂಡರು, ಪುರವಂತರು, ವಿವಿಧ ಸಂಘ-ಸಂಸ್ಥೆಗಳ ಹಾಲಿ ಮತ್ತು ಮಾಜಿ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು, ವೀರಭದ್ರೇಶ್ವರ ದೇವರ ಭಕ್ತರು, ಸ್ಥಳೀಯರು ಉಪಸ್ಥಿತರಿರುವರು ಎಂದು ಜಾತ್ರಾ ಮಹೋತ್ಸವ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.