Breaking News
Home / ಬೆಳಗಾವಿ / ಅಧರ್ಮದ ನಾಶಕ್ಕಾಗಿ ವೀರಭದ್ರೇಶ್ವರರು ಅವತರಿಸಿದರು- ಭಾಗೋಜಿಕೊಪ್ಪದ ಡಾ.ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಶ್ರೀಗಳು

ಅಧರ್ಮದ ನಾಶಕ್ಕಾಗಿ ವೀರಭದ್ರೇಶ್ವರರು ಅವತರಿಸಿದರು- ಭಾಗೋಜಿಕೊಪ್ಪದ ಡಾ.ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಶ್ರೀಗಳು

Spread the love

ಬೆಟಗೇರಿ:ಅಧರ್ಮದ ನಾಶಕ್ಕಾಗಿ ಹಾಗೂ ಜಗದ ಉದ್ಧಾರಕ್ಕೆ ಉಗ್ರಸ್ವರೂಪಿ ವೀರಭದ್ರೇಶ್ವರರು ಅವತರಿಸಿದರು. ಶಿವನು ಸೃಷ್ಟಿಸಿದ ಗಣಾಧೀಶ್ವರರಲ್ಲಿ ವೀರಭದ್ರೇಶ್ವರನೂ ಓರ್ವನಾಗಿದ್ದಾನೆ ಎಂದು ಭಾಗೋಜಿಕೊಪ್ಪದ ಡಾ.ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ನೂಲ ಹುಣ್ಣಿಮೆ ಮತ್ತು ಶ್ರಾವಣ ಮಾಸದ ಪ್ರಯುಕ್ತ ಇದೇ ಶುಕ್ರವಾರ ಆ.8 ಮತ್ತು ಶನಿವಾರ ಆ.9ರಂದು ನಡೆದ ಸ್ಥಳೀಯ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಬೆಟಗೇರಿ ಗ್ರಾ,ಮದ ಜನತೆ ದೇವರಲ್ಲಿ ಅಪಾರ ಭಕ್ತಿಯುಳ್ಳವರಾಗಿದ್ದು, ಇಲ್ಲಿಯ ಜನರು ಧಾರ್ಮೀಕ ಕಾರ್ಯಗಳಿಗೆ ನೀಡುತ್ತೀರುವ ಸಹಾಯ, ಸಹಕಾರ, ಭಕ್ತಿಯ ಸೇವೆ ಮೆಚ್ಚುವಂತಹದ್ದಾಗಿದೆ ಎಂದರು.
ಸತ್ತಿಗೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಸಮ್ಮುಖ ವಹಿಸಿ ಮಾತನಾಡಿದರು. ಸಂಗಯ್ಯ ಹಿರೇಮಠ, ಈರಯ್ಯ ಹಿರೇಮಠ ಜಾತ್ರಾ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದರು.
ಆ.8 ಮತ್ತು 9ರಂದು ಬೆಳಗ್ಗೆ 6ಗಂಟೆಗೆ ಇಲ್ಲಿಯ ವೀರಭದ್ರೇಶ್ವರ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಮಹಾಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ರಾತ್ರಿ 8 ಗಂಟೆಗೆ ಕಲಾವಿದೆ ಸುಜಾತಾ ಕಲ್ಮೇಶ ಮತ್ತು ತಂಡದವರಿಂದ ಸುಗಮ ಸಂಗೀತ ಕಾರ್ಯಕ್ರಮ ಜರುಗಿತು
ಆ.9 ರಂದು ಮುಂಜಾನೆ 8ಗಂಟೆಗೆ ಆರತಿ, ಕರಡಿ ಮಜಲು, ವಾದ್ಯಮೇಳದೊಂದಿಗೆ ಪುರವಂತರಿಂದ ವೀರಭದ್ರೇಶ್ವರ ದೇವರ ಒಡಪು ಹೇಳುವ ಮೂಲಕ ವೀರಭದ್ರೇಶ್ವರ ದೇವರ ಮತ್ತು ಭದ್ರಕಾಳಿ ಮಾತೆಯ ಮೂರ್ತಿಗಳ ಪಲ್ಲಕ್ಕಿ ಉತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ನಡೆದ ಬಳಿಕ ಪುರಜನರಿಂದ ಪೂಜೆ, ನೈವೇದ್ಯ ಸಮರ್ಪನೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ವಿಜೃಂಭನೆಯಿಂದ ನಡೆದ ಬಳಿಕ ಸುಗಮ ಸಂಗೀತ ಕಾರ್ಯಕ್ರಮ, ಶ್ರೀಗಳಿಗೆ, ಗಣ್ಯರಿಗೆ, ದಾನಿಗಳಿಗೆ ಸತ್ಕಾರ ಸಮಾರಂಭ, ಮಹಾಪ್ರಸಾದ ನಡೆದು ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು.
ಬಾಕ್ಸ್ ಐಟಮ್:
ಪುರವಂತರ ಭಕ್ತಿಯ ಪರಾಕಷ್ಟೇ ಪ್ರದರ್ಶನ: ವೀರಭದ್ರೇಶ್ವರ ದೇವರ ಭಕ್ತರಾದ ಪುರವಂತರು ಆಹಾ..ಹಾ..ವೀರಾ.., ಆಹಾ..ಹಾ..ರುದ್ರಾ.., ಕಡೆ..ಕಡೆ…ಅಂತಾ ವೀರಭದ್ರೇಶ್ವರ ದೇವರ ಒಡಪು ಹೆಳುವ ಸನ್ನಿವೇಶ ರುದ್ರಾವೇಶದ ಭಕ್ತಿಯ ಪರಾಕಾಷ್ಟೇ ತೋರಿಸಿದರು. ಅಷ್ಟೇ ಅಲ್ಲದೆ ಪುರವಂತರು ತಮ್ಮ ಗಲ್ಲ ಹಾಗೂ ನಾಲಿಗೆಯಲ್ಲಿ ಶಸ್ತ್ರಗಳನ್ನು ಚುಚ್ಚಿಕೊಳ್ಳುವದು ರುದ್ರಾವೇಶದಿಂದ ಒಡಪು ಹೇಳುವದು, ಸೊಜಿಯಿಂದ ಶಸ್ತ್ರದ ಜೋತೆಗೆ ಸುಮಾರು ಉದ್ದದ ಶಸ್ತ್ರದಾರವನ್ನು ನಾಲಿಗೆ ಹಾಗೂ ಒಂದು ಗಲ್ಲದಿಂದ ಮತ್ತೊಂದಡೆ ತಗೆಯುವ ದೃಶ್ಯ ನೊಡುಗರ ಮೈ ನೆವರಿಳಿಸುವಂತಿತ್ತು. ಭಕ್ತಿಯಿಂದ ವಿವಿಧ ಕಸರತ್ತು ಪ್ರದರ್ಶನ ಮಾಡಿದ ಪುರವಂತರು ವೀರಭದ್ರೇಶ್ವರ ದೇವರ ಭಕ್ತಿ ಕೃಪಾರ್ಶೀವಾದಕ್ಕೆ ಪಾತ್ರರಾದರು.
ಇಲ್ಲಿಯ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ ಆಚರಣೆ ಸಮಿತಿ ಪದಾಧಿಕಾರಿಗಳು, ಅಧ್ಯಕ್ಷರು, ಸದಸ್ಯರು, ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಗಣ್ಯರು, ರಾಜಕೀಯ ಮುಖಂಡರು, ಸಂತ ಶರಣರು, ಪುರವಂತರು, ಮಹಿಳೆಯರು ಅಪಾರ ಸಂಖ್ಯೆಯಲ್ಲಿ ಭಕ್ತರು, ಗ್ರಾಮಸ್ಥರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ